ಶಿವಮೊಗ್ಗ

ವಿಜ್ಞಾನ ಯುಗಕ್ಕೆ ತಕ್ಕಂತೆ ಮಕ್ಕಳಿಗೆ ತರಬೇತಿ ಅಗತ್ಯ

Published On :

ಶಿವಮೊಗ್ಗ: ಇದು ವಿಜ್ಞಾನದ ಯುಗವಾಗಿದ್ದು, ಈ ಯುಗಕ್ಕೆ ಅಗತ್ಯವಿರುವಂತೆ ವಿದ್ಯಾರ್ಥಿಗಳಿಗೆ ತರಬೇತಿ ನೀಡುವುದು, ಪ್ರೋತ್ಸಾಹಿಸುವುದು ಶಿಕ್ಷಕರಿಂದ ಆಗಬೇಕು ಎಂದು ವಿಧಾನಸಭಾಧ್ಯಕ್ಷ ಕಾಗೋಡುತಿಮ್ಮಪ್ಪ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಮತ್ತು ಜಿಪಂ ಆಶ್ರಯದಲ್ಲಿ ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಗುರುವಾರ ಆಯೋಜಿಸಿದ್ದ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ 2013ನೇ ಸಾಲಿನ ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿ, ಈ ಯುಗಕ್ಕೆ ಶಿಕ್ಷಕರ ಮಾರ್ಗದರ್ಶನ ಅವಶ್ಯಕ. ರಾಷ್ಟ್ರದ ಉನ್ನತಿಗೆ ಈ ಯುಗ ಹೊಸ ಆಯಾಮ ನೀಡಲಿದೆ ಎಂದ ಅವರು,
ಶಿಕ್ಷಕ ಸಮಾಜದ ಶಿಲ್ಪಿ. ಶಿಕ್ಷಕ ಸಕಾಲಿಕ ಮಾರ್ಗದರ್ಶಕನಾಗಿ ಶಿಕ್ಷಣ ನೀಡುವ ಜೊತೆಗೆ ಶ್ರಮಿಕರಿಗೆ ಉದ್ಯೋಗ, ಹಸಿದ ಒಡಲಿಗೆ ಅನ್ನ ಹಾಗೂ ಸಮೃದ್ಧ ರಾಷ್ಟ್ರಕಟ್ಟುವ ಕನಸನ್ನು ಸಾಕಾರಗೊಳಿಸುವ ಹಾಗೇ ವಿದ್ಯಾರ್ಥಿಗಳ ಮನಸ್ಸುಗಳನ್ನು ಸೃಜಿಸಬೇಕು. ರಾಷ್ಟ್ರಕ್ಕೆ ಉತ್ತಮ ನಾಗರಿಕರನ್ನು ಶಿಕ್ಷಕರು ಕೊಡುಗೆಯಾಗಿ ನೀಡಬೇಕು ಎಂದರು.
ಸಮಾರಂಭದಲ್ಲಿ ಜಿಪಂ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ, ಉಪಾಧ್ಯಕ್ಷೆ ಹೇಮಾಪಾವನಿ, ಶಾಸಕ ಎಂ.ಜೆ. ಅಪ್ಪಾಜಿ, ಶಾರದಾ ಪೂರ್ಯನಾಯ್ಕ, ಮಧು ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್, ಆರ್.ಕೆ. ಸಿದ್ದರಾಮಣ್ಣ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.