ವೈಜ್ಞಾನಿಕ ಮನೋಭಾವ ಅಗತ್ಯ: ಕಾಗೋಡು
ಶಿವಮೊಗ್ಗ: ಹೊಸತನ ಇಂದು ಅಗತ್ಯ. ಇದಕ್ಕೆ ತಕ್ಕಂತೆ ನಾವೂ ಬದಲಾಗಬೇಕಿದೆ. ವೈಜ್ಞಾನಿಕ ಮನೋಭಾವ ರೂಢಿಸಿಕೊಳ್ಳಬೇಕಿದೆ ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.
ನಗರದಲ್ಲಿ ಶುಕ್ರವಾರ ಪ್ರೆಸ್ ಕ್ಲಬ್ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು, ಮೂಢನಂಬಿಕೆಗಳನ್ನು ಬಿಟ್ಟು ವೈಜ್ಞಾನಿಕವಾಗಿ ಬೆಳೆಯಬೇಕು ಎಂದರು.
ಸರ್ಕಾರಕ್ಕೆ ಮಾರ್ಗದರ್ಶನ: ಅಡಕೆ ಕೊಳೆರೋಗ ಪೀಡಿತರಿಗೆ ನೆರವು ಸಿಗುತ್ತದೆ. ಮುಖ್ಯಮಂತ್ರಿಗಳು ಬಂದು ನೋಡಿದ್ದಾರೆ. ಸಚಿವರೂ ಗಮನಿಸಿದ್ದಾರೆ. ಸರ್ಕಾರಕ್ಕೆ ಅಗತ್ಯ ಮಾರ್ಗದರ್ಶನ ಮಾಡುತ್ತೇನೆ ಎಂದರು.
ಶಿವಮೊಗ್ಗ ನಗರದ ಅಭಿವೃದ್ಧಿಗೆ ಖಂಡಿತಾ ನೆರವು ನೀಡುತ್ತೇನೆ ಎಂದ ಅವರು, ಇದೇ ಮೊದಲ ಬಾರಿಗೆ ಒಂದೇ ಜಿಲ್ಲೆಗೆ ವಿಧಾನಸಭಾಧ್ಯಕ್ಷ ಹಾಗೂ ವಿಧಾನಪರಿಷತ್ ಸಭಾಪತಿ ಸ್ಥಾನ ಒಲಿದು ಬಂದಿದೆ. ಜಿಲ್ಲೆಯ ಇತಿಹಾಸದಲ್ಲಿ ಇದೊಂದು ಸುಯೋಗ. ಈ ಇಬ್ಬರ ಉಪಸ್ಥಿತಿಯನ್ನು ಸಮರ್ಪಕವಾಗಿ ಬಳಸಿಕೊಂಡರೆ ಅಭಿವೃದ್ಧಿ ಸಾಧ್ಯ ಎಂದರು.
ಶಾಸಕರಿಗೆ ತರಬೇತಿ: ಹಿಂದೆ ಹೇಗೆ ವಿಧಾನಸಭೆ ಕಲಾಪಗಳು ನಡೆಯುತ್ತಿದ್ದವು ಎಂಬುದರ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಮುಂದೆ ಹೇಗಾಗಬೇಕು ಎಂಬುದರ ಬಗ್ಗೆ ಮಾತ್ರ ನನ್ನ ಗಮನ ಎಂದ ಅವರು, ನೂತನ ಶಾಸಕರು ಕಲಾಪದಲ್ಲಿ ಭಾಗವಹಿಸುವ ಬಗ್ಗೆ ತರಬೇತಿ ನೀಡಲು ಸೆ.27 ಹಾಗೂ 28ರಂದು ಬೆಂಗಳೂರು ವಿಧಾನಸೌಧದಲ್ಲಿ ಕಾರ್ಯಕ್ರಮ ನಡೆಯುವುದು ಎಂದರು.
ತುಮರಿ ಸೇತುವೆ: ತುಮರಿ ಸೇತುವೆ ಬೇಗ ಆಗುವುದೇ ಎಂದು ಕಾಗೋಡು ತಿಮ್ಮಪ್ಪ ಅವರನ್ನು ಕೇಳಿದಾಗ, ನಾನು ಮುಖ್ಯಮಂತ್ರಿ ಅಲ್ಲ. ಸಚಿವ ಅಲ್ಲ. ನಾನು ಶಾಸಕ ಅಷ್ಟೇ. ಈಗ ಸ್ಪೀಕರ್ ಆಗಿದ್ದೇನೆ ಎಂದರು. ಕಾರ್ಯಕ್ರಮವು ಪ್ರೆಸ್ ಕ್ಲಬ್ ಅಧ್ಯಕ್ಷ ಕೆ.ಬಿ. ರಾಮಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯದರ್ಶಿ ಎನ್. ಮಂಜುನಾಥ್ ಇದ್ದರು. ಎನ್. ರವಿಕುಮಾರ್ ಪ್ರಾಸ್ತಾವಿಕ ಭಾಷಣ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

