ಹಾಸ್ಟೆಲ್ಗಳ ಅವ್ಯವಸ್ಥೆ ಖಂಡಿಸಿ ಎಬಿವಿಪಿ ಪ್ರತಿಭಟನೆ
ಶಿವಮೊಗ್ಗ: ರಾಜ್ಯದಲ್ಲಿರುವ ಹಿಂದುಳಿದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಹಾಸ್ಟೆಲ್ಗಳ ಅವ್ಯವಸ್ಥೆ ಖಂಡಿಸಿ ಎಬಿವಿಪಿ ಸಂಘಟನೆ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಸಚಿವರಿಗೆ ಸಂಘಟನೆ ಸದಸ್ಯರು ಮನವಿ ಮಾಡಿದರು.
ರಾಜ್ಯದಲ್ಲಿರುವ ಸರ್ಕಾರಿ ಸ್ವಾಮ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಹಾಸ್ಟೆಲ್ಗಳು ಅವ್ಯವಸ್ಥೆಯ ಆಗರವಾಗಿವೆ. ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳು ದೊರೆಯದೆ ಪ್ರತಿನಿತ್ಯ ವಿದ್ಯಾರ್ಥಿಗಳ ಸಂಕಷ್ಟದಲ್ಲಿ ಸಿಲುಕುವಂತಾಗಿದೆ. ಈ ಬಗ್ಗೆ ಹಾಸ್ಟೆಲ್ ವಾರ್ಡ್ನಗಳು ಯಾವುದೇ ಗಮನಹರಿಸುತ್ತಿಲ್ಲ. ಅಧಿಕಾರಿಗಳೂ ಕೂಡ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.
ಅವ್ಯವಸ್ಥೆ ಸರಿಪಡಿಸಿ: ಎಬಿವಿಪಿ ಸಂಘಟನೆ ಅಂತಹ ಹಾಸ್ಟೆಲ್ಗಳನ್ನು ಗುರುತಿಸಿ ಖುದ್ದು ಭೇಟಿ ಪರಿಶೀಲಿಸಿದೆ. ಅವ್ಯವಸ್ಥೆಯ ಬಗ್ಗೆ ಫೋಟೋಗಳನ್ನು ತೆಗೆಯಲಾಗಿದೆ. ಅಲ್ಲದೇ ವಿದ್ಯಾರ್ಥಿಗಳ ಅಭಿಪ್ರಾಯ ಕೂಡ ಸಂಗ್ರಹಿಸಲಾಗಿದೆ. ಆದ್ದರಿಂದ ಕೂಡಲೇ ಅಧಿಕಾರಿಗಳು ಹಾಸ್ಟೆಲ್ ಅವ್ಯವಸ್ಥೆಯನ್ನು ಸರಿಪಡಿಸಬೇಕು. ಇಲ್ಲವಾದಲ್ಲಿ ಸರ್ವೆ ವರದಿಯನ್ನು ಸಿದ್ದಪಡಿಸಿ ಪುಸ್ತಕ ರೂಪದಲ್ಲಿ ಹೊರತಂದು ಸೂಕ್ತ ಕ್ರಮಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ರಾಜ್ಯದಲ್ಲಿರುವ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಹಾಸ್ಟೆಲ್ಗಳ ಅವ್ಯವಸ್ಥೆ ಹೇಳತೀರದು. ಹಾಸ್ಟೆಲ್ಗಳಲ್ಲಿ ಆಹಾರ ಸರಬರಾಜು ಸೇರಿದಂತೆ ಮತ್ತಿತರೆ ವಿಷಯಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅಧಿಕಾರಿಗಳಿಗೆ ಈ ಬಗ್ಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ವಿದ್ಯಾರ್ಥಿಗಳು ದೂರು ನೀಡಲು ಹೆದರುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪ್ರತಿಭಟನೆಯಲ್ಲಿ ಸಂಘಟನೆಯ ಪ್ರಮುಖರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

