ಇಂದು ಉದ್ಘಾಟನೆ
ಶಿವಮೊಗ್ಗ: ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಉದ್ಘಾಟನಾ ಸಮಾರಂಭವು ಸೆ.7ರಂದು ಬೆಳಿಗ್ಗೆ 10ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ.
ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಉದ್ಘಾಟಿಸುವರು. ಪಾಸಿಟಿವ್ ಮೈಂಡ್ ಕ್ಲಿನಿಕ್ನ ವೈದ್ಯ ಡಾ. ಅರವಿಂದ ಎಸ್.ಟಿ., ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಇಂದುಮತಿ ಮುಖ್ಯ ಅತಿಥಿಯಾಗಿ ಆಗಮಿಸಲಿರುವರು. ಕಾಲೇಜಿನ ಪ್ರಾಚಾರ್ಯೆ ಎಸ್.ಆರ್. ಮಾಡ್ಯಾಳ್ ಅಧ್ಯಕ್ಷತೆ ವಹಿಸುವರು. ಹಿರಿಯ ಉಪನ್ಯಾಸಕ ಕೃಷ್ಣಮೂರ್ತಿ , ಸರೋಜ ಪಿ.ಹೆಗಡೆ, ಮುಂತಾದ ಗಣ್ಯರು ಉಪಸ್ಥಿತರಿರುವರು.
ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿ
ಶಿವಮೊಗ್ಗ: ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಸಕ್ತ ಸಾಲಿನ 14 ಮತ್ತು 17 ವರ್ಷ ವಯೋವುತಿಯೊಳಗಿನ ಶಾಲಾ ಬಾಲಕರ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಸೆ.13ರಂದು ಬೆ.9ಕ್ಕೆ ನಡೆಸಲಾಗುವುದು. ಅರ್ಹ ಕುಸ್ತಿಪಟುಗಳು ತಮ್ಮ ಹೆಸರನ್ನು ಅಂದು ಬೆಳಿಗ್ಗೆ 9 ಗಂಟೆಯೊಳಗಾಗಿ ಕ್ರೀಡಾಂಗಣದ ಸಂಘಟಕರಲ್ಲಿ ನೋಂದಾಯಿಸಿಕೊಳ್ಳಬೇಕು. ವಿವರಗಳಿಗೆ ಶಿವಕುಮಾರ್, ದೈಹಿಕ ಶಿಕ್ಷಣ ಶಿಕ್ಷಕ, ಮೊ.9741641435ನ್ನು ಸಂಪರ್ಕಿಸಲು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

