'ಮನುಷ್ಯನಿಗೆ ಸಂಸ್ಕಾರ, ಮಾರ್ಗದರ್ಶನ ಅಗತ್ಯ'
ಕ.ಪ್ರ.ವಾರ್ತೆ, ಶಿವಮೊಗ್ಗ, ಸೆ.6
ಮನುಷ್ಯ ಯಾವುದೇ ಒಂದು ಉನ್ನತವಾದ ಸ್ಥಾನಮಾನಕ್ಕೆ ತಲುಪಲಿ ಸರಿಯಾದ ಸಂಸ್ಕಾರ ಹಾಗೂ ಮಾರ್ಗದರ್ಶನ ಅಗತ್ಯ ಎಂದು ಗ್ರಾಮೀಣ ಪ್ರದೇಶದಲ್ಲಿ ಉಚಿತವಾಗಿ ಶಿಕ್ಷಣ ನೀಡುತ್ತಿರುವ ನಿವೃತ್ತ ಶಿಕ್ಷಕ ಎ.ಆರ್.ಪರಮೇಶ್ವರ್ ಹೇಳಿದರು.
ರೋಟರಿ ಪೂರ್ವ ಹಾಗೂ ಇನ್ನರ್ವೀಲ್ ಕ್ಲಬ್ ವತಿಯಿಂದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಸಂಸ್ಕಾರ ಹಾಗೂ ಮಾರ್ಗದರ್ಶನವನ್ನು ನೀಡುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಲು ಶಿಕ್ಷಕರ ಸಹಕಾರ ತುಂಬಾ ಅತ್ಯಗತ್ಯ ಎಂದರು.
ಇಂದಿನ ಶಿಕ್ಷಣ ವ್ಯವಸ್ಥೆಗೂ, ಹಿಂದಿನ ಶಿಕ್ಷಣ ವ್ಯವಸ್ಥೆಗೂ ತುಂಬಾ ಅಜಗಜಾಂತರ ಇದೆ. ಹಿಂದೆ ವಿದ್ಯಾರ್ಥಿಗಳಲ್ಲಿ ಗುರುಭಕ್ತಿ ಶ್ರದ್ಧೆ, ಭಯ ಇತ್ತು. ಈಗ ಎಲ್ಲವೂ ಮಾಯವಾಗಿದೆ ಎಂದು ವಿಷಾದಿಸಿದರು.
ಪುಣ್ಯದ ಕೆಲಸ: ಒಬ್ಬ ವಿದ್ಯಾರ್ಥಿಯನ್ನು ಸರಿಯಾದ ದಾರಿಯಲ್ಲಿ ನಡೆಸಲು ಕೇವಲ ಶಿಕ್ಷಕನಿಂದ ಮಾತ್ರ ಸಾದ್ಯ. ಈ ನಿಟ್ಟಿನಲ್ಲಿ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಅಗತ್ಯ. ಒಳ್ಳೆಯ ಗುರು, ಒಳ್ಳೆಯ ತಂದೆ-ತಾಯಿಗಳು ಸಿಗುವುದು ಒಂದು ಪುಣ್ಯದ ಫಲ ಎಂದು ಅವರು ಹೇಳಿದರು.
ಅತಿಥಿಯಾಗಿದ್ದ ನಿವೃತ್ತ ಪ್ರಾಂಶುಪಾಲ ಎನ್.ಎಚ್.ಶ್ರೀಕಾಂತ್ ಶಿಕ್ಷಕರನ್ನು ಅಭಿನಂದಿಸಿದರು. ಅಧ್ಯಕ್ಷತೆ ವಹಿಸಿದ್ದ ರೋಟರಿ ವಿದ್ಯಾಸಂಸ್ಥೆಯ ಅಧ್ಯಕ್ಷ ಜಿ. ವಿಜಯಕುಮಾರ್ ಶಿಕ್ಷಕರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.
ವೇದಿಕೆಯಲ್ಲಿ ಇನ್ನರ್ವೀಲ್ ಅಧ್ಯಕ್ಷರಾದ ಸುಜಯಪುರುಷೋತ್ತಮ್, ಮ್ಯಾನೇಜಿಂಗ್ ಟ್ರಸ್ಟಿ ಕಡಿದಾಳ್ ಗೋಪಾಲ್, ವಿದ್ಯಾಸಂಸ್ಥೆ ಕಾರ್ಯದರ್ಶಿ ಎಂ.ಎಲ್. ಪ್ರತಾಪ್, ಶ್ವೇತಾ ಆಶಿತ್, ಮಾಜಿ ಅಧ್ಯಕ್ಷರಾದ ಬಿಂದುವಿಜಯಕುಮಾರ್, ಎಚ್.ಬಿ. ಆದಿಮೂರ್ತಿ, ಬಿ. ಪ್ರಸನ್ನಕುಮಾರ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

