ಶಿವಮೊಗ್ಗ

ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರೇ ಶಿಲ್ಪಿ: ಶಾಸಕಿ ಶಾರದಾ

Published On :

ಕ.ಪ್ರ.ವಾರ್ತೆ  ಭದ್ರಾವತಿ  ಸೆ.7
ಶಿಕ್ಷಕರು ಉತ್ತಮ ಪ್ರಜೆಗಳನ್ನು ನಿರ್ಮಿಸುವಲ್ಲಿ ಮಾಡುವ ಶಿಲ್ಪಿಗಳು ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ ತಿಳಿಸಿದರು.
ಅವರು ಶನಿವಾರ ಪಟ್ಟಣದ ಜಯಶ್ರೀ ಕಲ್ಯಾಣ ಮಂದಿರದಲ್ಲಿ ಕ್ಷೇತ್ರ ಶಿಕ್ಷಣ ಇಲಾಖೆ ಹಾಗೂ ತಾಲೂಕು ಆಡಳಿತ ಏರ್ಪಡಿಸಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಮತ್ತು ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ರಾಜಕಾರಣಿಗಳೇ ಕಾರಣ: ಕುವೆಂಪು ವಿ.ವಿ. ನಿವೃತ್ತ ಪ್ರೊಫೆಸರ್ ಡಾ. ಶ್ರೀಕಂಠ ಕೂಡಿಗೆ ಮಾತನಾಡಿ, ರಾಷ್ಟ್ರದ ಹಲವು ಸಮಸ್ಯೆಗೆ ರಾಜಕಾರಣಿಗಳೇ ಕಾರಣ. ರಾಜಕಾರಣಿಗಳಿಗೂ ಕನಿಷ್ಠ ವಿದ್ಯಾರ್ಹತೆ ನಿಗದಿಪಡಿಸಬೇಕೆಂದು ಒತ್ತಾಯಿಸಿದರು.
  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎಂ.ಜೆ.ಅಪ್ಪಾಜಿ ಎಲ್ಲಾ ರಾಜಕಾರಣಿಗಳೂ ಕಳಂಕಿತರಾಗಿರುವುದಿಲ್ಲ ಎದರು. ಜಿಪಂ ಉಪಾಧ್ಯಕ್ಷೆ ಹೇಮಾಪಾವನಿ ಡಾ. ರಾಧಾಕೃಷ್ಮನ್ ಅವರ ಭಾವಚಿತ್ರ ಅನಾವರಣ ಮಾಡಿದರು. ಜಿಪಂ ಸದಸ್ಯ ಎಚ್.ಎಲ್. ಷಡಾಕ್ಷರಿ, ಎಸ್. ಕುಮಾರ್, ಸುಜಾತ, ತಾಪಂ ಅಧ್ಯಕ್ಷೆ ಭುವನೇಶ್ವರಿ, ಉಪಾಧ್ಯಕ್ಷೆ ಗೌರಮ್ಮ, ತಹಸೀಲ್ದಾರ್ ಸಿದ್ದಮಲ್ಲಪ್ಪ, ತಾಪಂ ಇಒ ಎಂ. ಮಲ್ಲೇಶಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್. ಕೃಷ್ಣಪ್ಪ, ಪೌರಾಯುಕ್ತ ಬಿ.ಡಿ. ಬಸವರಾಜಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್, ಸಿದ್ದಬಸಪ್ಪ, ಮೋತಿನಾಯ್ಕ, ರೇವಣಸಿದ್ದಪ್ಪ, ಜಯಪ್ಪ, ಕೃಷ್ಣಮೂರ್ತಿ, ಮಹಮದ್ ನಜರುಲ್ಲಾ, ಪರಮೇಶ್ವರಪ್ಪ, ನಗರಸಭಾ ಸದಸ್ಯ ಅನಿಲ್ ಕುಮಾರ್, ಲಕ್ಷ್ಮಿದೇವಿ, ಜಿ.ಡಿ.ನಟರಾಜ್, ಭೈರಪ್ಪಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.