ಸುದ್ದಿ ಸಂಕ್ಷೇಪ
ನಾಳೆ ಉಪನ್ಯಾಸ
ಶಿವಮೊಗ್ಗ: ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಸೆ.10ರಂದು ಬೆಳಿಗ್ಗೆ 11ಕ್ಕೆ ಪಠ್ಯಕ್ರಮ ಚೌಕಟ್ಟಿನಲ್ಲಿ ಶಿಕ್ಷಕರ ಪಾತ್ರ ವಿಶೇಷ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಿದೆ. ನಿವೃತ್ತ ವಿಷಯ ಪರಿವೀಕ್ಷಕ ಹನುಮಾನ್ ಉಪನ್ಯಾಸ ಮಾಡುವರು. ಒಕ್ಕಲಿಗರ ಸಂಘದ ಅಧ್ಯಕ್ಷ ಪ್ರೊ. ಜೆ.ಎಲ್. ಪದ್ಮನಾಭ್ ಮತ್ತಿತರರು ಉಪಸ್ಥಿತರಿರುವರು ಎಂದು ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.
ವಾರ್ಷಿಕ ಸಭೆ
ಶಿವಮೊಗ್ಗ: ಶ್ರೀ ವಿಶ್ವಕರ್ಮ ಯುವಕರ ಸಂಘ ಸೆ.10ರಂದು ಸಂಜೆ 6ಗಂಟೆಗೆ ಶ್ರೀಕಾಳಿಕಾಪರಮೇಶ್ವರಿ ದೇವಸ್ಥಾನದಲ್ಲಿ ಸಂಘದ 16ನೇ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ. ಮುಖ್ಯಅತಿಥಿಯಾಗಿ ಸಮನ್ವಯಕಾಶಿ, ಎಸ್. ರಮೇಶ್ ಮತ್ತಿತರರು ಪಾಲ್ಗೊಳ್ಳುವರು ಎಂದು ಸಂಘದ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಡಿಕ್ಕಿ: 6 ಜನರಿಗೆ ಗಾಯ
ಸಾಗರ: ತಾಲೂಕಿನ ವರದಹಳ್ಳಿ ಸಮೀಪದ ದುರ್ಗಾಂಬ ದೇವಸ್ಥಾನದ ವೃತ್ತದ ತಿರುವಿನಲ್ಲಿ ಟ್ಯಾಕ್ಟರ್ ಹಾಗೂ ಮಹೀಂದ್ರ ಪಿಕಪ್ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ 6 ಜನರು ಗಾಯಗೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ. ಕಾನುಸರದ ಗೋ ಶಾಲೆಗೆ ಹುಲ್ಲು ಒಯ್ಯುತ್ತಿದ್ದ ಟ್ರ್ಯಾಕ್ಟರಿಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಟ್ಯಾಕ್ಟರ್ 40 ಅಡಿ ಆಳದ ಕಂದಕಕ್ಕೆ ಉರುಳಿ ಬಿದಿದ್ದು ಟ್ಯಾಕರ್ನಲ್ಲಿದ್ದ ಆರು ಜನರಿಗೆ ಸಣ್ಣಪುಟ್ಟ ಗಾಯವಾಗಿ ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದೆ.
12ರಂದು ಜೆಸಿಐ ಸಪ್ತಾಹ 2013
ಶೃಂಗೇರಿ: ತಾಲೂಕಿನ ನೆಮ್ಮಾರು ಪಂಚಾಯಿತಿ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಸೆ.12 ರಿಂದ 18 ರವರೆಗೆ ಜೆಸಿ ಸಪ್ತಾ 2013 ಕಾರ್ಯಕ್ರಮ ನಡೆಯಲಿದೆ. 12 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮಾವವಿನಕಾಡು ರಂಗನಾಥ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜೆಸಿಐ ಅಧ್ಯಕ್ಷ ತಲಗಾರು ನಾಗೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಬಿ. ಶಿವಶಂಕರ್ ಬಾಸ್ಕರ್ ರಾವ್ ಮತ್ತಿತರರು ಪಾಲ್ಗೊಳಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

