ಅರಿಶಿಣ- ಕುಂಕುಮ ಕಾರ್ಯಕ್ರಮ
ಸೊರಬ: ಭಾರತ ತನ್ನ ಉನ್ನತ ಸಾಂಸ್ಕೃತಿಕ ನೆಲಗಟ್ಟಿನಿಂದಾಗಿ ದೇಶ, ವಿದೇಶಿಯರ ಅನುಕರಣೆಗೆ ಪಾತ್ರವಾಗಿದೆ ಎಂದು ಕೀರ್ತನಕಾರ ಬಸೂರು ಸೂರ್ಯನಾರಾಯಣ ಹೆಗಡೆ ತಿಳಿಸಿದರು. ತಾಲೂಕು ಕೆರೆಹಳ್ಳಿ ಗ್ರಾಮದ ಗಾಳೆಮ್ಮ ದೇಗುಲದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಏರ್ಪಡಿಸಿದ್ದ ಸಂಸ್ಕೃತಿ ಹಾಗೂ ಧಾರ್ಮಿಕತೆ ಪ್ರತೀಕದ ಅರಿಶಿಣ- ಕುಂಕುಮ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗ್ರಾಮದ ಶ್ರೀದೇವಿ ನಾಡಿಗ್ ಅರಿಶಿಣ-ಕುಂಕುಮದ ಮಹತ್ವ ಕುರಿತಂತೆ ಮಾತನಾಡಿದರು. ಯೋಜನಾಧಿಕಾರಿ ಸತೀಶ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಸದಸ್ಯೆ ಗಂಗಮ್ಮ, ಡಾ. ವಿಶ್ವನಾಥ್ ನಾಡಿಗೇರ್, ಯೋಜನೆ ಮೇಲ್ವಿಚಾರಕ ಮಂಜುನಾಥ್, ಒಕ್ಕೂಟದ ಅಧ್ಯಕ್ಷೆ ಶ್ಯಾಮಲ, Ú ಸದಸ್ಯರು ಮತ್ತು ಗ್ರಾಮಸ್ಥರು ಇದ್ದರು.
ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ
ಶಿವಮೊಗ್ಗ: ಅರಣ್ಯ ಇಲಾಖೆ ಸೆ.11ರಂದು ಬೆಳಿಗ್ಗೆ 9.30ಕ್ಕೆ ನಗರದ ಶ್ರೀಗಂಧದ ಕೋಠಿಯಲ್ಲಿರುವ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಆವರಣದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಜಿಲ್ಲಾ ರಕ್ಷಣಾಧಿಕಾರಿ ಕೌಶಲೇಂದ್ರಕುಮಾರ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಸಿಕಾಂತ್ ಸೆಂಥಿಲ್ ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸ್ಮಿತಾಬಿಜ್ಜೂರ್ ಉಪಸ್ಥಿತರಿರುವರು.
ನಾಳೆ ಜಿಪಂ ಸಾಮಾನ್ಯ ಸಭೆ
ಶಿವಮೊಗ್ಗ: ಸೆ.12ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ಸಾಬ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ ಅವರು ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತಿಯ ಸಾಮಾನ್ಯ ಸಭೆ ಏರ್ಪಡಿಸಲಾಗಿದೆ. ಸದಸ್ಯರುಗಳು ಸಕಾಲದಲ್ಲಿ ಸಭೆಗೆ ಆಗಮಿಸಿ, ಸಭೆಯ ಕಾರ್ಯಕಲಾಪಗಳಲ್ಲಿ ಭಾಗವಹಿಸುವಂತೆ ಹಾಗೂ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಆಗಮಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಶಿವಮೊಗ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಐದನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳಿಗೆ ಸೇರಿದ ವರ್ಗ-1, ವರ್ಗ-2ಎ, ವರ್ಗ-3ಎ ಮತ್ತು ಬಿ. ವಿದ್ಯಾರ್ಥಿಗಳಿಗೆ ಮೆಟ್ರಿಕ್ಪೂರ್ವ ವಿದ್ಯಾರ್ಥಿವೇತನ ಮಂಜೂರು ಮಾಡಲು ಉದ್ಧೇಶಿಸಿದ್ದು, ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾಭ್ಯಾಸ ಮಾಡುತ್ತಿರುವ ಸಂಸ್ಥೆಗಳ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಪೋಷಕರ ವಾರ್ಷಿಕ ಆದಾಯ 44,500 ಮೀರಿರಬಾರದು. ಹಿಂದಿನ ತರಗತಿಯಲ್ಲಿ ಶೇ.75ಕ್ಕಿಂತ ಹೆಚ್ಚಿನ ಹಾಜರಾತಿ ಹೊಂದಿದ್ದು ತೇರ್ಗಡೆ ಹೊಂದಿದವರಾಗಿರಬೇಕು. ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವವರು ನವೀಕರಣ ವಿದ್ಯಾರ್ಥಿವೇತನ ಪಡೆಯಲು ಅರ್ಹರಲ್ಲ. ಅಂತಹ ಅಭ್ಯರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕು. ಅರ್ಹ ವಿದ್ಯಾರ್ಥಿಗಳು ನಿಗದಿತ ನಮೂನೆಯ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಮುಖ್ಯೋಪಾಧ್ಯಾಯರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಾರ್ಯಾಲಯ, ದೇವರಾಜ ಅರಸು ಭವನ, ಬೈಪಾಸ್ ರಸ್ತೆ, ವಿದ್ಯಾನಗರ, ದೂರವಾಣಿ ಸಂಖ್ಯೆ 08182-240078ನ್ನು ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

