ನೇರ ನೇಮಕಾತಿ
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಫಸ್ಟ್ ಸೋರ್ಸ್ ಚನೈ ಆಶ್ರಯದಲ್ಲಿ ಸೆ. 13ರಂದು ಬೆಳಿಗ್ಗೆ 10 ರಿಂದ ಸಂಜೆ 3 ಗಂಟೆವರೆಗೆ ಕಸ್ಟಮರ್ಸ್‌ರ್ವೀಸ್ ಅಸೋಸಿಯೇಟ್ ಹುದ್ದೆಗೆ ನೇರ ನೇಮಕಾತಿಗಾಗಿ ಕಚೇರಿಯಲ್ಲಿ ಸಂದರ್ಶನ ನಡೆಯುವುದು. ಅರ್ಹ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹದು. ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ಮತ್ತು 3 ವರ್ಷದ ಡಿಪ್ಲೋಮಾ ಉತ್ತೀರ್ಣರಾಗಿರಬೇಕು. 23 ರಿಂದ 30 ವರ್ಷ ವಯೋವುತಿ ಹೊಂದಿರಬೇಕು. ಚನೈನಲ್ಲಿ ಕೆಲಸ ಮಾಡಲು ಇಚ್ಚೆ ಇರಬೇಕು. ಈ ಅರ್ಹತೆ ಹೊಂದಿರುವ ಅರ್ಹ ಮಹಿಳಾ, ಪುರುಷ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ. ವಿವರಗಳಿಗಾಗಿ- 08182- 255293.
ಸರ್ವ ಸದಸ್ಯರ ಸಭೆ
ಶಿವಮೊಗ್ಗ: ಬ್ರಹ್ಮಶ್ರೀ ನಾರಾಯಣಗುರು ಪತ್ತಿನ ಸಹಕಾರ ಸಂಘ ಸೆ.15ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಭಾಂಗಣದಲ್ಲಿ ಸಂಘದ ಸರ್ವ ಸದಸ್ಯರ ಸಭೆ ಕರೆದಿದೆ. ಸಂಘದ ಅಧ್ಯಕ್ಷ ಡಿ. ದೇವಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಎಲ್. ಕೇಶವಮೂರ್ತಿ ತಿಳಿಸಿದ್ದಾರೆ.
ಉದ್ಘಾಟನೆ
ಶಿವಮೊಗ್ಗ- ಶ್ರೀ ವಿಚಾರ ವೇದಿಕೆಯ ಉದ್ಘಾಟನಾ ಸಮಾರಂಭವನ್ನು ಸೆ.16ರಂದು ನಗರದ ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಬೆಳಿಗ್ಗೆ 9.30ಕ್ಕೆ ಹಮ್ಮಿಕೊಳ್ಳಲಾಗಿದೆ. ಶ್ರೀ ವಿನಯಾನಂದ ಸರಸ್ವತಿ ಸ್ವಾಮೀಜಿ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ. ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, ಗೌರವಾಧ್ಯಕ್ಷರಾಗಿ ಅ.ಪ. ರಾಮಭಟ್ಟರು, ಅಧ್ಯಕ್ಷರಾಗಿ ಎಚ್.ಬಿ. ರಮೇಶ್ ಬಾಬು ಆಯ್ಕೆಯಾಗಿದ್ದಾರೆ. ವಿವರಗಳಿಗಾಗಿ- 9964072793.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

