ಶಿಕ್ಷಕರು ಪ್ರೇರಣಾಶಕ್ತಿಗಳಾಗಿ: ಹನುಮಾನ್
ಶಿವಮೊಗ್ಗ: ಶಿಕ್ಷಕರಾದವರು ವಿದ್ಯಾರ್ಥಿಗಳಿಗೆ ಪ್ರೇರಣಾಶಕ್ತಿಯಾಗಬೇಕು. ವಿದ್ಯಾರ್ಥಿಗಳು ಶಿಕ್ಷಕರನ್ನು ಮೀರಿ ವಿದ್ವತ್ತನ್ನು ಸಂಪಾದಿಸಿ ಬೆಳೆಯಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕ ಎ.ಎಸ್. ಹನುಮಾನ್ ಹೇಳಿದರು.
ಕುವೆಂಪು ಶತಮಾನೋತ್ಸವ ಮಹಾವಿದ್ಯಾಲಯದ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು, ಭಾರತೀಯ ಸಂಸ್ಕೃತಿಯಲ್ಲಿ ಗುರುಗಳಿಗೆ ವಿಶೇಷ ಸ್ಥಾನವಿದೆ. ಯಾವುದೇ ಒಂದು ದೇಶ ಶಿಕ್ಷಕನನ್ನು ಮೀರಿ ಅಭಿವೃದ್ಧಿಯಾಗಲು ಸಾಧ್ಯವಿಲ್ಲ ಎಂದರು.
ಪ್ರತಿಯೊಬ್ಬ ವಿದ್ಯಾರ್ಥಿಯ ಸಾಧನೆಯ ಹಿಂದೆ ಹಲವು ಗುರುಗಳ ಶ್ರಮ ಇರುತ್ತದೆ. ಪ್ರಚಲಿತ ವಿದ್ಯಾಮಾನಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಅವರನ್ನು ಭವಿಷ್ಯದ ಸವಾಲುಗಳನ್ನೇಡಿರಿಸಲು ಸಜ್ಜುಗೊಳಿಸಬೇಕು ಎಂದು ಹೇಳಿದರು.
1964ರಲ್ಲಿಯೇ ಡಿ.ಎಸ್. ಕೊಠಾರಿಯವರ ನೇತೃತ್ವದಲ್ಲಿ ರಚಿಸಿದ್ದ ಸಮಿತಿ, ದೇಶದಲ್ಲಿ ಏಕರೂಪದ ಶಿಕ್ಷಣ ಪದ್ಧತಿಯನ್ನು ಜಾರಿಗೆ ತರಬೇಕು ಎಂದು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಇದನ್ನಾಧರಿಸಿ 1982ರಲ್ಲಿ ರಾಷ್ಟ್ರೀಯ ಶಿಕ್ಷಣ ಕಾಯ್ದೆ ಜಾರಿಗೆ ತರಲಾಗುತ್ತದೆ.
ಪ್ರಯೋಗಶೀಲತೆ ಬೆಳೆಸಿ: ಆದರೆ, ಅಂತಿಮವಾಗಿ 2004ರಲ್ಲಿ ರಾಷ್ಟ್ರೀಯ ಪಠ್ಯಕ್ರಮ ಕಾನೂನನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದ ಅವರು, ಕಾನೂನಿನ ಮುಖ್ಯ ಉದ್ದೇಶವೆಂದರೆ, ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವುದರೊಂದಿಗೆ ಜ್ಞಾನವನ್ನು ನೀಡುವುದಕ್ಕೆ ಮೊದಲು ಪ್ರಾಧಾನ್ಯತೆ ನೀಡಿ, ಮಕ್ಕಳಲ್ಲಿ ಪ್ರಯೋಗ ಶೀಲತೆಯನ್ನು ಬೆಳೆಸುವುದು ಮುಖ್ಯ ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶಾಲಿನಿ ವಹಿಸಿದ್ದರು. ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜೆ.ಎಲ್. ಪದ್ಮನಾಭ್, ಸಾರ್ವಜನಿಕ ಶಿಕ್ಷಣ ಇಲಾಖೆ ನಿವೃತ್ತ ನಿರ್ದೇಶಕ ಚಂದ್ರಶೇಖರ್ ಇದ್ದರು.
7ನೇ ದಿನಕ್ಕೆ ಕಾಲಿಟ್ಟ ಪಶುವೈದ್ಯ ವಿದ್ಯಾರ್ಥಿಗಳ ಮುಷ್ಕರ
ಶಿವಮೊಗ್ಗ: ಭಾರತೀಯ ಪಶುವೈದ್ಯ ಪರಿಷತ್ತಿನ ಮಾನ್ಯತೆ ದೊರಕಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಪಶು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಮುಷ್ಕರ ಮಂಗಳವಾರ ಏಳನೇ ದಿನಕ್ಕೆ ಕಾಲಿಟ್ಟಿದೆ.
ಸೋಮವಾರ ಗಣಪತಿ ಹಬ್ಬದ ದಿನವೂ ಸಹ ಮುಷ್ಕರವನ್ನು ನಿಲ್ಲಿಸದೇ ಕಾಲೇಜಿನ ಎದುರು ಪ್ರತಿಭಟನೆ ಮುಂದುವರಿಸಿದ್ದ ವಿದ್ಯಾರ್ಥಿಗಳು ಮಂಗಳವಾರ ಧರಣಿ ಸ್ಥಳದಲ್ಲಿ ವಿದ್ಯಾರ್ಥಿಗಳ ಪ್ರತಿಕೃತಿಯನ್ನು ನೇಣು ಹಾಕುವ ಮೂಲಕ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು.
ಉಪನ್ಯಾಸಕರೂ ಭಾಗಿ: ಈ ನಡುವೆ ಕಾಲೇಜಿನ ಡೀನ್ ಅವರು ವಿದ್ಯಾರ್ಥಿ ಪ್ರತಿನಿಧಿಗಳ ಸಭೆಯನ್ನು ಕರೆದಿದ್ದರು. ಕಾಲೇಜಿನ ಕೆಲವು ಉಪನ್ಯಾಸಕರೂ ಸಹ ಭಾಗವಹಿಸಿದ್ದ ಈ ಸಭೆಯಲ್ಲಿ ಡೀನ್ ಅವರು ಮುಷ್ಕರ ಹಿಂಪಡೆದು ಪಾಠ ಪ್ರವಚನಕ್ಕೆ ಅವಕಾಶ ನೀಡುವಂತೆ ಸಲಹೆ ನೀಡಿದರು. ತಪ್ಪಿದಲ್ಲಿ ಉಗ್ರ ಕ್ರಮ ಎದುರಿಸಲು ಸಿದ್ಧರಾಗಿ ಎಂದು ಎಚ್ಚರಿಕೆಯನ್ನೂ ನೀಡಿದರು.
ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಿ ಎಂದು ಕೋರಿದರು. ಆದರೆ, ವಿದ್ಯಾರ್ಥಿಗಳು ತಮ್ಮ ಬೇಡಿಕೆಯಿಂದ ಹಿಂದೆ ಸರಿಯದೇ, ಕಾಲೇಜಿಗೆ ಪಶುವೈದ್ಯ ಪರಿಷತ್ತಿನ ಮಾನ್ಯತೆ ಸಿಗುವ ವರೆಗೂ ಸಿಗುವ ವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ತಿಳಿಸಿದರು. ಈ ಬಗ್ಗೆ ಸಂಬಂಧಪಟ್ಟವರು ಲಿಖಿತವಾಗಿ ಭರವಸೆ ನೀಡುವ ವರೆಗೂ ಹೋರಾಟ ಮುಂದುವರಿಯುತ್ತದೆ ಎಂದರು.
ಮಾತುಕತೆ ಮುರಿದುಬಿದ್ದ ಕಾರಣ ವಿದ್ಯಾರ್ಥಿಗಳು ವಾಪಸು ಧರಣಿ ಸ್ಥಳಕ್ಕೆ ತೆರಳಿ ಪ್ರತಿಭಟನೆ ಮುಂದುವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

