ಹುತಾತ್ಮರ ಸ್ಮಾರಕ್ಕೆ ಪುಷ್ಪ ನಮನ
ಶಿವಮೊಗ್ಗ: ಅರಣ್ಯ ಇಲಾಖೆ ನಗರದ ಶ್ರೀಗಂಧದ ಕೋಠಿಯಲ್ಲಿರುವ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರ ಸ್ಮಾರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
2012-13ರ ಅವಧಿಯಲ್ಲಿ ಕರ್ತವ್ಯದಲ್ಲಿದ್ದು ಹುತಾತ್ಮರಾದ ರಾಜ್ಯದ 43 ಅರಣ್ಯ ಸಿಬ್ಬಂದಿಯನ್ನು ಇದೇ ವೇಳೆ ಸ್ಮರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ರಕ್ಷಣಾಧಿಕಾರಿ ಕೌಶಲೇಂದ್ರ ಕುಮಾರ್, ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಗಳಲ್ಲಿ ಸಿಬ್ಬಂದಿಗಳ ಕೊರತೆ ನಡುವೆಯೂ ಉತ್ತಮ ಕೆಲಸಗಳನ್ನು ಮಾಡಲಾಗುತ್ತಿದೆ. ಆದರೆ, ಪೊಲೀಸ್ ಸೇವೆಗಿಂತ ಅರಣ್ಯ ಇಲಾಖೆಯ ಕೆಲಸ ಬಹಳ ಕಷ್ಟಕರ.
ಪ್ರಶಂಸನೀಯ: ಪೊಲೀಸರು ನಗರ, ಗ್ರಾಮಾಂತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ವಿಷಯದಲ್ಲಿ ಕೆಲ ಸೌಲಭ್ಯದೊಂದಿಗೆ ಕೆಲಸ ಮಾಡುತ್ತಾರೆ.
ಆದರೆ, ಅರಣ್ಯ ಸಿಬ್ಬಂದಿ ಮೂಲ ಸೌಲಭ್ಯಗಳಿಲ್ಲದೆಯೂ ದೇಶದ ಅರಣ್ಯ ಸಂಪತ್ತು ಹಾಗೂ ವನ್ಯಜೀವಿಗಳನ್ನು ರಕ್ಷಿಸಲು ಚಳಿ, ಮಳೆ, ಬಿಸಿಲೆನ್ನದೆಶ್ರಮಿಸುತ್ತಿರುವುದು ಪ್ರಶಂಸನಿಯ ಎಂದರು.
ಕಾರ್ಯಕ್ರಮದಲ್ಲಿ ಅರಣ್ಯ ಸಂರಕ್ಷಣಾಧಿಕಾರಿ ಸ್ಮಿತಾ ಬಿಜ್ಜೂರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಸಿಕಾಂತ್ ಸೆಂಥಿಲ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂಜಯ್ ಬಿಜ್ಜೂರ್, ಅರಣ್ಯ ಸಂರಕ್ಷಣಾಧಿಕಾರಿ ರವಿಕುಮಾರ್ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

