ಶಿವಮೊಗ್ಗ

ಇಂದು ಆಟೋ ಚಾಲಕರ ಹಿತರಕ್ಷಣಾ ವೇದಿಕೆ ಅಸ್ತಿತ್ವಕ್ಕೆ

Published On :

ಕ.ಪ್ರ.ವಾರ್ತೆ, ಶಿವಮೊಗ್ಗ, ಸೆ.13
ಆಟೋ ಚಾಲಕರ ಹಿತರಕ್ಷಣಾ ವೇದಿಕೆ ಅಸ್ತಿತ್ವಕ್ಕೆ ಬಂದಿದ್ದು, ಸೆ.13ರಂದು ಸಂಜೆ 5 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ವೇದಿಕೆ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಅಧ್ಯಕ್ಷ ಡಿ. ರಾಜಶೇಖರ್ ತಿಳಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸ್ ಚಾಲಕರನ್ನು ಹೊರತುಪಡಿಸಿ ಆಟೋ ಚಾಲಕರು, ಟ್ಯಾಕ್ಸಿ ಚಾಲಕರು ಹಾಗೂ ಲಾರಿ ಚಾಲಕರನ್ನು ಒಳಗೊಂಡ ವೇದಿಕೆ ಇದ್ದಾಗಿದ್ದು, ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ವೇದಿಕೆ ಉದ್ಘಾಟಿಸುವರು. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ. ಶಾಸಕ ಕೆ.ಬಿ. ಪ್ರಸನ್ನಕುಮಾರ್, ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಜಿಲ್ಲಾ ರಕ್ಷಣಾಧಿಕಾರಿ ಕೌಶಲೇಂದ್ರ ಕುಮಾರ್ ಮೊದಲಾದವರು ಪಾಲ್ಗೊಳ್ಳುವರು ಎಂದು ತಿಳಿಸಿದರು.
2,000 ನೋಂದಾವಣಿ: ನಗರದಲ್ಲಿ 5 ಸಾವಿರ ಚಾಲಕರ ಪೈಕಿ, ವೇದಿಕೆ 4 ಸಾವಿರ ಆಟೋ ಚಾಲಕರಲ್ಲಿ 2 ಸಾವಿರ ಆಟೋ ಚಾಲಕರು ವೇದಿಕೆಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. 1 ಸಾವಿರ ಲಾರಿ ಚಾಲಕರನ್ನು ವೇದಿಕೆ ಹೊಂದಿದ್ದು, ಆಟೋ ಚಾಲಕರಿಗೆ ಡಿಜಿಟಲ್ ಮೀಟರ್ ನೀಡಬೇಕು. ನಿವೇಶನ ಒದಗಿಸಬೇಕು.
ವಾಹನ ಚಾಲಕರ ಕುಟುಂಬಕ್ಕೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಚಾಲಕರಿಗೆ ಜೀವ ವಿಮಾ ಮತ್ತಿತರ ಬೇಡಿಕೆಗಳನ್ನು ಜಿಲ್ಲಾಡಳಿತ ಹಾಗೂ ಸರ್ಕಾರದ ಮುಂದಿಡಲಾಗಿದ್ದು, ಈ ಬೇಡಿಕೆಗಳನ್ನು ಈಡೇರಿಸುವ ಪ್ರಯತ್ನದಲ್ಲಿ ವೇದಿಕೆ ತೊಡಗಲಿವೆ ಎಂದು ತಿಳಿಸಿದರು.
ಕಾನೂನು ಬದ್ಧ ಸಂಚಾರ: ನಗರದಲ್ಲಿ 3,962 ಆಟೋಗಳು ಕಾನೂನು ಬದ್ಧವಾಗಿ ಸಂಚಾರ ಮಾಡುತ್ತಿವೆ. ಇವುಗಳಲ್ಲಿ ಈಗಾಗಲೇ 1,350 ಆಟೋಗಳಿಗೆ ಮೀಟರ್ ಅಳವಡಿಸಲಾಗಿದೆ. ಕೆಲ ಆಟೋಗಳಿಗೆ ಮೀಟರ್ ಅಳವಡಿಸಿಕೊಳ್ಳದ ಕಾರಣ, ಅಳವಡಿಸಿರುವ ಆಟೋಗಳು ಮೀಟರ್ ಬಳಕೆ ಮಾಡುತ್ತಿಲ್ಲ. ಇನ್ನೊಂದು ತಿಂಗಳೊಳಗೆ ಆಟೋ ಮೀಟರ್‌ಗಳನ್ನು ಚಾಲನೆಗೊಳಿಸಲಾಗುವುದು.
ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಉಪಾಧ್ಯಕ್ಷ ಚಿದಾನಂದ, ಸಲಹೆಗಾರ ಎಂ.ಪಿ. ಸಂಪತ್, ಖಜಾಂಚಿ ರುಘುಕುಮಾರ್, ಕಾರ್ಯದರ್ಶಿ ಶಫೀವುಲ್ಲಾ ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.