ಶಿವಮೊಗ್ಗ

15ಕ್ಕೆ ಜಯ ಕರ್ನಾಟಕ ಘಟಕ ಉದ್ಘಾಟನೆ

Published On :

ಸಾಗರ: ನಾಡುನುಡಿ, ನೆಲಜಲದ ಅಸ್ತಿತ್ವಕ್ಕೆ ಧಕ್ಕೆ ಬಂದಾಗ ಹಾಗೂ ಸ್ಥಳೀಯ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಲು ಮುತ್ತಪ್ಪ ರೈ ಅಧ್ಯಕ್ಷತೆಯ ಜಯ ಕರ್ನಾಟಕ ಯುವ ಘಟಕವನ್ನು ಉಳ್ಳೂರಿನಲ್ಲಿ ಸ್ಥಾಪಿಸಲಾಗಿದೆ ಎಂದು ಘಟಕದ ಗೌರವಾಧ್ಯಕ್ಷ ಎ.ಸಿ. ಮಂಜುನಾಥ್ ಹೇಳಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟಕದ ಉದ್ಘಾಟನಾ ಸಮಾರಂಭವನ್ನು ಸಾಮಾಜಿಕ ಚಟುವಟಿಕೆ ಮೂಲಕ ಹಮ್ಮಿಕೊಳ್ಳಲಾಗಿದ್ದು, ಸೆ.15ರಂದು ಉಳ್ಳೂರಿನ ಸಿಗಂದೂರೇಶ್ವರಿ ಕಾಲೇಜು ಆವರಣದಲ್ಲಿ ಬೆಳಿಗ್ಗೆ 10 ಗಂಟೆಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಸ್ವಾಮಿ ವಿವೇಕಾನಂದರ 150ನೇ ಜನ್ಮದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮವನ್ನು ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಸುರೇಶ್ ರೈ ಉದ್ಘಾಟಿಸುವರು. ಜಿಲ್ಲಾ ಘಟಕದ ಕಾರ್ಯಧ್ಯಕ್ಷ ಸುರೇಶ್ ಶೆಟ್ಟಿ, ಸಿಗಂದೂರೇಶ್ವರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೃಷ್ಣಮೂರ್ತಿ ಬಿಳಿಗಲ್ಲೂರು, ಉಳ್ಳೂರು ಗ್ರಾಪಂ ಅಧ್ಯಕ್ಷ ಮಂಜಪ್ಪ, ಉಳ್ಳೂರು ಚಂದ್ರು, ತಿರುಮಲ, ಅಕ್ಷರ, ಪರಮೇಶ್ವರ್, ರಾಮು ಇತರರು ಪಾಲ್ಗೊಳ್ಳುವರು.

ನಗರ ಕಾರ್ಯಕ್ರಮ
ಶಿವಮೊಗ್ಗ: ವಾಹನ ಚಾಲಕರ ಹಿತರಕ್ಷಣಾ ವೇದಿಕೆ- ವೇದಿಕೆ ಉದ್ಘಾಟನಾ ಸಮಾರಂಭ- ಕಿಮ್ಮನೆ ರತ್ನಾಕರ್, ಮುಖ್ಯಅತಿಥಿ- ಕೆ.ಎಸ್. ಈಶ್ವರಪ್ಪ, ಬಿ.ವೈ. ರಾಘವೇಂದ್ರ, ಆಯನೂರು ಮಂಜುನಾಥ್ ಮತ್ತಿತರರು, ಅಧ್ಯಕ್ಷತೆ- ಡಿ. ರಾಜಶೇಖರ್, ಸ್ಥಳ- ಕುವೆಂಪು ರಂಗಮಂದಿರ, ಸಮಯ- ಸಂಜೆ 5ಕ್ಕೆ

ಯುವ ಕ್ರೀಡಾ ಔರ್ ಖೇಲ್ ಅಭಿಯಾನ
ಶಿವಮೊಗ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಿಲ್ಲಾಡಳಿತ, ಜಿಪಂ, ತಾಪಂ ಹಾಗೂ ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಪ್ರಸಕ್ತ ಸಾಲಿನ ಶಿಕಾರಿಪುರ ತಾಲೂಕು ಮಟ್ಟದ ಪಂಚಾಯತ್ ಯುವ ಕ್ರೀಡಾ ಔರ್ ಖೇಲ್ ಅಭಿಯಾನ ಕ್ರೀಡಾಕೂಟವನ್ನು ಸೆಪ್ಟಂಬರ್ 17 ಮತ್ತು 18ರಂದು ಶಿಕಾರಿಪುರ ತಾಲೂಕು ಕ್ರೀಡಾಂಗಣದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಆಸಕ್ತ ಕ್ರೀಡಾಪಟುಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸೂಚಿಸಲಾಗಿದೆ. ಈ ಕ್ರೀಡಾಕೂಟದಲ್ಲಿ ಬಾಲಕ-ಬಾಲಕಿಯರಿಗೆ ಪ್ರತ್ಯೇಕವಾಗಿ ಕ್ರೀಡೆಗಳನ್ನು ಸಂಘಟಿಸಲಾಗುವುದು. ಕ್ರೀಡಾಕೂಟದಲ್ಲಿ ಭಾಗವಹಿಸಲಿಚ್ಚಿಸುವವರು ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರುವವರಾಗಿದ್ದು, 16 ವರ್ಷ ವಯೋವುತಿಯೊಳಗಿನವರಾಗಿರಬೇಕು. ಕ್ರೀಡಾಳುಗಳು ತಮ್ಮ ಶಾಲೆಯ ಮುಖ್ಯೋಪಾದ್ಯಾಯರಿಂದ ದೃಢೀಕರಣ ಪತ್ರ ಹಾಗೂ ಸಂಬಂಧಪಟ್ಟ ಗ್ರಾಪಂ ಕಾರ್ಯದರ್ಶಿಯವರಿಂದ ವಾಸಸ್ಥಳದ ದೃಢೀಕರಣ ಪತ್ರವನ್ನು ಪಡೆದು ಸಲ್ಲಿಸಬೇಕು. ವಿದ್ಯಾರ್ಥಿಗಳಲ್ಲದವರು ವಾಸಸ್ಥಳದ ಮತ್ತು ವಯಸ್ಸಿನ ದೃಢೀಕರಣವನ್ನು ತಾಲೂಕಿನ ತಹಸೀಲ್ದಾರರಿಂದ ಪಡೆದು ಸಲ್ಲಿಸಬೇಕು. ಅಥ್ಲೆಟಿಕ್ಸ್ ವಿಭಾಗದಲ್ಲಿ ಒಬ್ಬರು 3 ಸ್ಪರ್ಧೆಗಳಲ್ಲಿ ಮಾತ್ರ ಭಾಗವಹಿಸಬಹುದಾಗಿದೆ. ಆಸಕ್ತ ಕ್ರೀಡಾಪಟುಗಳು ಸ್ಪರ್ಧೆಗಳು ನಡೆಯುವ ದಿನಾಂಕದಂದು ಬೆಳಿಗ್ಗೆ 9 ಗಂಟೆಯೊಳಗಾಗಿ ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದು, ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ವಿವರಗಳಿಗಾಗಿ ಎ.ಜಿ. ಗಣೇಶಪ್ಪ, ಸಹಾಯಕ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿಗಳು, ಶಿಕಾರಿಪುರ ಇವರನ್ನು ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.