ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕವಾಗಿ ಸಿದ್ಧಪಡಿಸಿ: ರಾಜೇಂದ್ರ
ಶಿವಮೊಗ್ಗ: ಜಾಗತೀಕರಣ ಪ್ರವೇಶವಾಗಿ ಎರಡು ದಶಕಗಳೇ ಕಳೆದಿವೆ. ಆದರೆ ಎಲ್ಲಾ ವರ್ಗದವರಿಗೂ ಇದರ ಫಲ ದೊರಕಿಲ್ಲ. ಈ ಹಿನ್ನಲೆಯಲ್ಲಿ ನಾವು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕವಾಗಿ ಸಿದ್ಧಪಡಿಸಬೇಕಾಗಿದೆ. ಆಧುನಿಕ ಯುಗದಲ್ಲಿ ಇಂಗ್ಲಿಷ್ ಭಾಷೆ ಕಲಿಯುವುದು ಬಹಳ ಮುಖ್ಯ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಇಂಗ್ಲಿಷ್ ವಿಭಾಗದ ಅಧ್ಯಕ್ಷ ಪ್ರೊ. ರಾಜೇಂದ್ರ ಚೆನ್ನಿ ತಿಳಿಸಿದರು.
ಕಮಲಾ ನೆಹರು ಕಾಲೇಜು ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಇಂಗ್ಲಿಷ್ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರದಲ್ಲಿ ಅವರು, ಪ್ರತಿಯೊಂದು ಭಾಷೆಯನ್ನು ಕಲಿಯುವುದು ಕರಗತ ಮಾಡಿಕೊಳ್ಳುವುದು ಮುಖ್ಯ. ಮುಖ್ಯವಾಗಿ ಇಂಗ್ಲಿಷ್ ಭಾಷೆ ಹೆಚ್ಚು ಪ್ರಚಲಿತವಾಗಿರುವುದರಿಂದ ಇಂಗ್ಲಿಷ್ ಕಲಿಯುವುದು ಅನಿವಾರ್ಯವಾಗಿದೆ. ಅಲ್ಲದೇ ಇಂಗ್ಲಿಷ್ವ್ಯವಹಾರಿಕ ಭಾಷೆಯಾಗಿಯು ಸ್ಥಾನ ಪಡೆದುಕೊಳ್ಳುವುದರಿಂದ ಕಲಿಯುವುದು ಸೂಕ್ತ ಎಂದರು.
ನಮ್ಮ ಜೀವನದಲ್ಲಿ ಪ್ರತಿಯೊಂದು ಸಂದರ್ಭದಲ್ಲೂ ಭಾಷೆ ಪ್ರಮುಖ ಪಾತ್ರ ವಹಿಸಿದ್ದು, ಕನ್ನಡ ಭಾಷೆಯೊಂದಿಗೆ ಇಂಗ್ಲಿಷ್ ಕೂಡ ಅಷ್ಟೇ ಮುಖ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಸತ್ಯನಾರಾಯಣ, ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಡಿ.ಎಸ್. ಮಂಜುನಾಥ್, ಡಾ. ಎಚ್.ಎಸ್. ನಾಗಭೂಷಣ್, ಸಂಪನ್ಮೂಲ ವ್ಯಕ್ತಿ ಪ್ರೊ. ಡಿ. ಯೋಗಾನಂದ, ಪ್ರೊ. ವಿ.ಎಸ್. ಶ್ರೀಧರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

