ಶಿವಮೊಗ್ಗ

ಆಂಗ್ಲ ಮಾಧ್ಯಮ ವ್ಯಾಮೋಹ ತೊರೆಯಿರಿ

Published On :

ಭದ್ರಾವತಿ: ಮಕ್ಕಳು ಮತ್ತು ಪೋಷಕರು ಆಂಗ್ಲ ಮಾಧ್ಯಮ ಮತ್ತು ಖಾಸಗಿ ಶಾಲೆಗಳ ವ್ಯಾಮೋಹ ತೊರೆಯಬೇಕೆಂದು ಡಾ. ಕುಮಾರಸ್ವಾಮಿ ಕರೆ ನೀಡಿದರು.
 ತಾಲೂಕಿನ ಅರಳಿಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿ, ಇಂದು ಸರ್ಕಾರಿ ಶಾಲೆಯಲ್ಲೂ ಸೃಜನಶೀಲ ಶಿಕ್ಷಕರಿದ್ದು ಅವರು ಉತ್ತಮ ಫಲಿತಾಂಶ ನೀಡುವಲ್ಲಿ ಪೂರಕ ಪಾತ್ರ ವಹಿಸುತ್ತಿದ್ದಾರೆಂದರು.
 ಡಾ. ನಾಗರಾಜ್, ಹಿಂದಿನ ಶಿಕ್ಷಣ ಪದ್ಧತಿ ಹಾಗೂ ಇಂದಿನ ಶಿಕ್ಷಣ ಪದ್ಧತಿಯನ್ನು ತುಲನೆ ಮಾಡಿದರು. ಶಾಸಕ ಎಂ.ಜೆ. ಅಪ್ಪಾಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಹಾಗೂ ಅಂಗನವಾಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 54 ಮಂದಿ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳ ಸಂಖ್ಯೆ ಕಡಮೆಯಾಗುತ್ತಿರುವ ಬಗ್ಗೆ ಕಳಕಳಿಯನ್ನು ವ್ಯಕ್ತಪಡಿಸಿದರು.
 ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಗೌಂಡರ್ ಯುವಕರ ಸಂಘ, ಪೋಷಕರು ಸಮಾರಂಭವನ್ನು ಏರ್ಪಡಿಸಿದ್ದರು. ಗ್ರಾಪಂ ಸದಸ್ಯ ಪಾರ್ಥಿಬನ್, ಖಲೀಲ್, ಚಂದ್ರಪ್ಪ, ಹೇಮಕುಮಾರ್, ರವಿನಾಯ್ಕ, ಮಣಿಶೇಖರ್, ಶಿವಣ್ಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.