ಶಿವಮೊಗ್ಗ

ರಸ್ತೆ ಮೇಲ್ದರ್ಜೆಗೇರಿಸಲು ಕ್ರಮ

Published On :

ಶಿವಮೊಗ್ಗ: ಆಗುಂಬೆಯಿಂದ ಉಡುಪಿವರೆಗಿನ 87 ಕಿ.ಮೀ ರಸ್ತೆ ಹಾಗೂ ಆಯನೂರಿನಿಂದ ಕುಂದಾಪುರದವರೆಗಿನ 137 ಕಿ.ಮೀ ರಸ್ತೆಯನ್ನು ಮೇಲ್ದರ್ಜೆಗೇರಿಸಲು ಸರ್ಕಾರ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.
 ಭಾನುವಾರ ಗಾಜನೂರಿನ ಪ್ರೌಢಶಾಲೆಯ ನೂತನ ಕೊಠಡಿ ಉದ್ಘಾಟಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ರಾಜ್ಯ ಹೆದ್ದಾರಿ ವ್ಯಾಪ್ತಿಯಲ್ಲಿರುವ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿ ಕೇಂದ್ರ ಸಚಿವರೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಸದ್ಯದಲ್ಲೆ ಅನುಮತಿ ದೊರೆಯಲಿದೆ ಎಂದು ತಿಳಿಸಿದರು.
 ಆಗುಂಬೆ ಘಾಟಿಯಲ್ಲಿ ಬೃಹತ್ ವಾಹನಗಳ ಸಂಚಾರಕ್ಕೆ ರಸ್ತೆ ಸುಗಮವಾಗಿಲ್ಲ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವ ಚಿಂತನೆ ನಡೆದಿದೆ. ಅಲ್ಲದೇ ಆಯನೂರಿನಿಂದ ಕೊಲ್ಲೂರು ಮಾರ್ಗವಾಗಿ ಪ್ರವಾಸಿ ವಾಹನಗಳ ಸಂಚಾರ ಅಧಿಕವಾಗಿದ್ದು, ಕುಂದಾಪುರದವರೆ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ ಎಂದು ತಿಳಿಸಿದರು.
  ರಾಜ್ಯದಲ್ಲಿ ಸಾಕ್ಷರತಾ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕಿದೆ. ಈಗಾಗಲೇ 17 ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ಈ ಹಿಂದೆ ಶೇ.64.6 ರಷ್ಟಿದ್ದ ಸಾಕ್ಷರತಾ ಪ್ರಮಾಣ ಇದೀಗ ಶೇ. 75ಕ್ಕೇರಿದೆ. ಸಾಕ್ಷರತಾ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದು ತಿಳಿಸಿದರು.
1952 ರಿಂದ ಇಲ್ಲಿಯವರೆಗೂ ಅಡಕೆ ತೋಟಕ್ಕೆ ಪರಿಹಾರ ಕೊಟ್ಟ ಉದಾಹರಣೆ ಇಲ್ಲ. ಇದೇ ಪ್ರಥಮ ಬಾರಿಗೆ ಅಡಕೆ ಬೆಳೆ ನಷ್ಟಕ್ಕೆ ಪರಿಹಾರ ನೀಡಲಾಗುತ್ತಿದೆ ಎಂದು ತಿಳಿಸಿದರು. ಮಳೆಯಿಂದಾಗಿ ಹಾನಿಯಾಗಿರುವ ರಸ್ತೆ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ ತಿಳಿಸಿದರು.
 ಗಾಜನೂರು ಇತಿಹಾಸದಲ್ಲೆ ನಿದಿಗೆ ವೃತ್ತ 2ರ ಭಾಗದಲ್ಲಿ 16 ಕೋಟಿ ರುಪಾಯಿ ಕಾಮಗಾರಿ ಪೂರ್ಣಗೊಂಡಿದೆ. ಸುವರ್ಣ ಗ್ರಾಮ ಯೋಜನೆಗೆ ಗ್ರಾಪಂ ಕ್ರಿಯಾ ಯೋಜನೆ ರೂಪಿಸಬೇಕು. ಯೋಜನೆಯಡಿ ಸಮುದಾಯ ಭವನ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಅವಕಾಶವಿದೆ ಎಂದು ಮಾಹಿತಿ ನೀಡಿದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.