ಮಧು ಭ್ರಷ್ಟಾಚಾರದ ಪಾಠ ಮಾಡುವ ಅಗತ್ಯವಿಲ್ಲ
ಸಾಗರ: ಜೆಡಿ(ಎಸ್)ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಅವರಿಂದ ನಾವು ಭ್ರಷ್ಟಾಚಾರದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಇಲ್ಲಿನ ವೆಂಕಟರಮಣ ಸಭಾಂಗಣದಲ್ಲಿ ವಿವಿಧ ಪಕ್ಷಗಳಿಂದ ದೊಡ್ಡ ಸಂಖ್ಯೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡವರನ್ನು ಪಕ್ಷಕ್ಕೆ ಬರಮಾಡಿಕೊಂಡು ಅವರು ಮಾತನಾಡಿದರು.
ನಿವೇಶನ ಮಾರಾಟ: ಮಧು ಬಂಗಾರಪ್ಪ ಈಡಿಗ ಸಮಾಜಕ್ಕೆ ಸೇರಬೇಕಾಗಿದ್ದ ಕಾಲೇಜು ಜಾಗವನ್ನು ನಿವೇಶನವಾಗಿ ಪರಿವರ್ತಿಸಿ ಮಾರಾಟ ಮಾಡಿದ್ದಾರೆ ಎಂದು ಅವರ ಸಹೋದರ ಕುಮಾರ್ ಬಂಗಾರಪ್ಪ ಅವರೆ ಪ್ರತಿಭಟನೆ ಮಾಡಿದ್ದಾರೆ. ಈಡಿಗ ಸಮಾಜಕ್ಕೆ ಸೇರಬೇಕಾಗಿದ್ದ ಆಸ್ತಿಯನ್ನು ತಮ್ಮ ಸ್ವಂತಕ್ಕೆ ಮಾಡಿಕೊಂಡು, ಈಗ ಬೇರೆಯವರ ಮೇಲೆ ಗೂಬೆ ಕೂರಿಸುವ ಪ್ರಯತ್ನವನ್ನು ಮಧು ಬಂಗಾರಪ್ಪ ಬಿಡಬೇಕು ಎಂದರು.
ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ನೇತೃತ್ವದಲ್ಲಿ ಸಾವಿರಾರು ಮುಖಂಡರು ವಿವಿಧ ಪಕ್ಷಗಳಿಂದ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವುದು ಪಕ್ಷದ ಬಲವನ್ನು ಇನ್ನಷ್ಟು ಹೆಚ್ಚಿಸಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಈಡಿಗ ಸಮಾಜದ ಸೋಲೂರು ಮಠಕ್ಕೆ 3.50 ಕೋಟಿ ರೂ. ನೀಡಿ ಅಭಿವೃದ್ದಿಪಡಿಸಿದರೆ, ಕೋಟಿ ಚೆನ್ನಯ್ಯ ಹೆಸರಿನಲ್ಲಿ ಕಾರ್ಕಳದಲ್ಲಿ ಥೀಮ್ಸ್ ಪಾರ್ಕ್ ನಿರ್ಮಿಸುವ ಮೂಲಕ ಜನಾಂಗದ ಅಭಿವೃದ್ದಿಗೆ ಶ್ರಮಿಸಿದ್ದಾರೆ ಎಂದರು.
ಕಾಂಗ್ರೆಸ್ ಧೂಳಿಪಟ: ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಜಿಲ್ಲೆಯಲ್ಲಿ ಜಾತಿ ರಾಜಕಾರಣ ನಡೆಯುವುದಿಲ್ಲ. ಮಧು ಬಂಗಾರಪ್ಪ ಹಾಗೂ ಕಾಗೋಡು ತಿಮ್ಮಪ್ಪ ಅವರ ಹೊಂದಾಣಿಕೆ ರಾಜಕೀಯದಿಂದ ಕುಮಾರ್ ಬಂಗಾರಪ್ಪಗೆ ಟಿಕೆಟ್ ವಂಚಿಸಿ, ಮಂಜುನಾಥ ಬಂಡಾರಿಗೆ ನೀಲಾಗಿದೆ. ಕಾಂಗ್ರೆಸ್ ನಿಷ್ಕ್ರಿಯ ಕಾರ್ಯ ವೈಖರಿಯೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಎಂದರು.
ಬಿಜೆಪಿ ಗ್ರಾಮಾಂತರ ಘಟಕದ ಅಧ್ಯಕ್ಷ ಚೇತನರಾಜ್ ಕಣ್ಣೂರು ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಯು.ಎಚ್. ರಾಮಪ್ಪ, ಶರಾವತಿ ಸಿ.ರಾವ್, ಜಯಂತ್, ಟಿ.ಡಿ.ಮೇಘರಾಜ್, ಕಸ್ತೂರಿ ನಾಗರಾಜ್, ಸತೀಶಬಾಬು, ಸುಮನಾ ಗೋಮ್ಸ್, ಶಿವಾನಂದಪ್ಪ, ಷಣ್ಮುಖಪ್ಪ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

