ಕಾಂಗ್ರೆಸ್ ಸಾಮಾಜಿಕ ನ್ಯಾಯದ ಪರ
ಭದ್ರಾವತಿ: ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯದ ಪರ ಇರುವ ಸರ್ಕಾರ, ರೈತರ ಹಾಗೂ ಮಹಿಳೆಯರ ರಕ್ಷಣೆಗೋಸ್ಕರ ಇರುವ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಅವರು ಪಟ್ಟಣದ ಕನಕ ಮಂಟಪ ಮೈದಾನದಲ್ಲಿ ಗುರುವಾರ ಮಧ್ಯಾಹ್ನ ಕಾಂಗ್ರೆಸ್ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಮಂಜುನಾಥ ಭಂಡಾರಿ ಪರ ಪ್ರಚಾರ ಸಮಿತಿ ಏರ್ಪಡಿಸಿದ್ದ ಸಭೆಯಲ್ಲಿ ಕಿಕ್ಕಿರಿದು ಸೇರಿದ್ದ ಜನರನ್ನುದ್ದೇಶಿಸಿ ಮಾತನಾಡಿ, ಭದ್ರಾವತಿ ಜನತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಇಬ್ರಾಹಿಂ ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡದೆ ತಪ್ಪು ಮಾಡಿದ್ದಾರೆ. ಇಲ್ಲಿನ ಎರಡು ಕೈಗಾರಿಕೆಗಳು ಅಭಿವೃದ್ಧಿಯಾಗಬೇಕಾಗಿದೆ. ರಸ್ತೆಗಳು ಅಭಿವೃದ್ಧಿಯಾಗಬೇಕಾಗಿದೆ. ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳು ಪೂರ್ಣವಾಗಬೇಕಾಗಿದೆ. ಇವೆಲ್ಲಾ ಕೆಲಸಗಳು ಪೂರ್ಣವಾಗಬೇಕಾದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಅವರಿಗೆ ನಿಮ್ಮ ಮತಗಳನ್ನು ನೀಡಿ ಎಂದರು.
ಬಿಜೆಪಿ ಪಕ್ಷದವರು ಧಾರ್ಮಿಕ ಅಲ್ಪಸಂಖ್ಯಾತರ ವಿರೋಧ ಕಟ್ಟಿಕೊಳ್ಳುವ ನಡವಳಿಕೆಯನ್ನು ಪ್ರದರ್ಶಿಸುತ್ತಿದ್ದಾರೆ. ಇದರಿಂದ ಕೋಮುಸೌಹಾರ್ದತೆಗೆ ಧಕ್ಕೆ ಬಢಿರುತ್ತದೆ. ವಿನಾಕಾರಣ ಬಾಬ್ರಿ ಮಸೀದಿ ದ್ವಂಸ ಮಾಡಿ ದೇಶದಲ್ಲಿ ಅಶಾಂತಿಯನ್ನು ಹರಡಿದ್ದಾರೆ. ಮಹಾತ್ಮ ಗಾಂಧಿಯನ್ನು ಕೊಂದ ನಾತೂರಾಂ ಗೋಡ್ಸೆ ಚಿತ್ರವನ್ನು ಪೂಜಿಸುವ ಆರ್.ಎಸ್.ಎಸ್ ಸಂಘಟಕರು ಗಾಂಧಿ ಹತ್ಯೆಗೆ ನಾವು ಕಾರಣರಲ್ಲ ಎನ್ನುತ್ತಾರೆ. ಮೋದಿಯೂ ಸಹ ಓರ್ವ ಹಾರ್ಡ್ಕೋರ್ ಆರ್.ಎಸ್.ಎಸ್ ಕಾರ್ಯಕರ್ತ ಎಂದರು.
ಕರ್ನಾಟಕದಲ್ಲಿ ಮೋದಿ ಅಲೆಯನ್ನು ಮಾಧ್ಯಮಗಳ ಮೂಲಕ ಬಿಜೆಪಿ ಸೃಷ್ಟಿಸಿದೆಯೇ ಹೊರತು ಆ ರೀತಿ ಯಾವುದೇ ಅಲೆ ವಾಸ್ತವವಾಗಿ ಕಂಡುಬಂದಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

