ಜಾಗೃತ ಸರ್ಕಾರಕ್ಕಾಗಿ ಮತ ಚಲಾಯಿಸಿ
ಶಿವಮೊಗ್ಗ: ಮತದಾನ ಸಾಂವಿಧಾನಿಕ ಹಕ್ಕಾಗಿದ್ದು, ಜಾಗೃತ ಮತದಾರರು ತಪ್ಪದೆ ಲೋಕಸಭಾ ಚುನಾವಣೆಯಲ್ಲಿ ಭಾಗವಹಿಸುವ ಮೂಲಕ ಸಂವಿಧಾನದ ಆಶಯ ಎತ್ತಿ ಹಿಡಿಯಬೇಕೆಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶರಶ್ಚಂದ್ರ ಬಿ. ಅಂಗಡಿ ಯುವ ಮತದಾರರಿಗೆ ಕರೆ ನೀಡಿದರು.
ಜಿಲ್ಲಾಡಳಿತ ಶಿವಮೊಗ್ಗ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಮತದಾರರ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜಾಗೃತ ಸರ್ಕಾರವನ್ನು ಅಧಿಕಾರಕ್ಕೆ ತರುವುದು ಪ್ರತಿಯೊಬ್ಬ ಮತದಾರರ ಕರ್ತವ್ಯ. ಈ ನಿಟ್ಟಿನಲ್ಲಿ ಸಂವಿಧಾನದತ್ತ ಅಧಿಕಾರ ಚಲಾಯಿಸುವ ಮೂಲಕ ತಮ್ಮ ಹಕ್ಕನ್ನು ಸಾಬೀತುಪಡಿಸಬೇಕೆಂದು ಕರೆ ನೀಡಿದರು.
ಸುಸ್ಥಿರ ಸಮಾಜ: ಇತ್ತೀಚಿನ ಕೆಲವು ವರ್ಷಗಳಲ್ಲಿ ರಾಜಕೀಯ ಪರಿಸ್ಥಿತಿ ವ್ಯತ್ಯಾಸಗಳಿಂದಾಗಿ ವ್ಯವಸ್ಥೆ ಬಗೆಗೆ ಜನಸಾಮಾನ್ಯರಿಗೆ ಜಿಗುಪ್ಸೆ ಮೂಡಿದೆ.
ಈ ಹಿನ್ನೆಲೆಯಲ್ಲಿ ಜಾಗೃತ ಮತದಾರರು ಲೋಕಸಭಾ ಚುನಾವಣೆಯಲ್ಲಿ ಪಾಲ್ಗೊಳ್ಳುವ ಮೂಲಕ ಸುಸ್ಥಿರ ಸಮಾಜದ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು.
ಮತದಾರರ ಜಾಗೃತಿ ಜಾಥಾಗೆ ಚಾಲನೆ ನೀಡಿದ ಮೊದಲನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಚ್.ಎಂ. ನಂಜುಂಡಸ್ವಾಮಿ ಮಾತನಾಡಿ, ದೇಶದ ಬದಲಾವಣೆಗೆ ಯುವ ಶಕ್ತಿಯೇ ಕಾರಣವಾಗಬೇಕು. ಈ ನಿಟ್ಟಿನಲ್ಲಿ ಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಯುವ ಮತದಾರರು ತಮ್ಮ ಹಕ್ಕು ಚಲಾಯಿಸುವ ಮೂಲಕ ದೇಶದ ಸಮೃದ್ಧಿಗಾಗಿ ಸುಭದ್ರ ಸರ್ಕಾರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು.
ಪ್ರಾಂಶುಪಾಲ ಪ್ರೊ. ಎಂ.ಕೆ. ನಾರಾಯಣಸ್ವಾಮಿ, ಜಿಲ್ಲಾ ವಾರ್ತಾಧಿಕಾರಿ ಹಿಮಂತರಾಜು, ರಾಷ್ಟ್ರೀಯ ಮತ್ತು ದಕ್ಷಿಣ ಏಷಿಯಾ ವಿಪತ್ತು ನಿರ್ವಹಣಾ ತಂಡದ ಸದಸ್ಯ ಡಾ. ವಿ.ಎಲ್.ಎಸ್. ಕುಮಾರ್ ಹಾಗೂ ಕಾಲೇಜಿನ ಪ್ರಾಧ್ಯಾಪಕರು ಉಪಸ್ಥಿತರಿದ್ದರು. ಪ್ರಾಧ್ಯಾಪಕ ಬಿ.ಆರ್. ಧನಂಜಯ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

