ತೃತೀಯ ರಂಗಕ್ಕೆ ಅಧಿಕಾರ ನಿಶ್ಚಿತ
ನರಸಿಂಹರಾಜಪುರ: ಈ ಬಾರಿಯ ಲೋಕಸಭಾ ಚುನಾವಣೆಯು 1996ರ ಚುನಾವಣೆಯ ಪುನರಾವರ್ತನೆಯಾಗಲಿದ್ದು, ಕೇಂದ್ರದಲ್ಲಿ ತೃತೀಯ ರಂಗ ಅಧಿಕಾರಕ್ಕೆ ಬರಲಿದೆ. ಎಚ್.ಡಿ. ದೇವೇಗೌಡರು ಪ್ರಧಾನಿಯಾಗಲಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಅಭ್ಯರ್ಥಿ ಧನಂಜಯಕುಮಾರ್ ಭವಿಷ್ಯ ನುಡಿದರು.
ಶನಿವಾರ ಪಟ್ಟಣದ ಮುಖ್ಯರಸ್ತೆಯಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದ ನಂತರ ವಾಟರ್ ಟ್ಯಾಂಕ್ ಸಮೀಪದ ರಂಗಮಂದಿರದಲ್ಲಿ ನಡೆದ ಜೆಡಿಎಸ್ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ 8ರಿಂದ 12 ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಲಿದ್ದಾರೆ. ಮುಂದಿನ ದಿನಗಳಲ್ಲಿ ಬಲಿಷ್ಠ ಪ್ರಾದೇಶಿಕ ಪಕ್ಷಗಳಿಗೆ ಭವಿಷ್ಯವಿದೆ. ನಾನು ಈ ಚುನಾವಣೆಯಲ್ಲಿ ಗೆದ್ದರೆ 2 ತಿಂಗಳ ಒಳಗೆ ಅಡಕೆ ಹಳದಿ ಎಲೆ ರೋಗದ ಸಮಸ್ಯೆ ಹಾಗೂ ಒತ್ತುವರಿ ಸಮಸ್ಯೆಯನ್ನು ಬಗೆಹರಿಸುತ್ತೇನೆ.
ಸಮಸ್ಯೆ ಬಗೆಹರಿಸಲು ಸಾಧ್ಯವಾಗದಿದ್ದರೆ ಮುಂದೆ ಎಂದೂ ಶೃಂಗೇರಿ ಕ್ಷೇತ್ರಕ್ಕೆ ಕಾಲಿಡುವುದಿಲ್ಲ ಎಂದು ಅವರು ಭರವಸೆ ನೀಡಿದರು.
ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಟಿ. ರಾಜೇಂದ್ರ ಮಾತನಾಡಿ, ಶಿಸ್ತಿನ ಪಕ್ಷ ಎಂದು ಹೆಸರು ಪಡೆದಿದ್ದ ಬಿಜೆಪಿ ಪಕ್ಷವು ಪಕ್ಷಕ್ಕಾಗಿ ಓಟು ಕೊಡಿ ಎಂದು ಕೇಳದೆ ಮೋದಿಗಾಗಿ ಓಟು ಕೊಡಿ ಎಂದು ಪ್ರಚಾರ ಮಾಡುತ್ತ ಪಕ್ಷವನ್ನು ದಿವಾಳಿ ಎಬ್ಬಿಸಿದೆ. ಇದು ಆ ಪಕ್ಷದ ಹಿರಿಯ ನಾಯಕರಾದ ವಾಜಪೇಯಿ, ಆಡ್ವಾಣಿ ಅಂತಹವರಿಗೆ ಮಾಡಿದ ಅವಮಾನವಾಗಿದೆ. ಈಗ ಬಿಜೆಪಿ ವ್ಯಕ್ತಿ ಆಧಾರಿತ ಪಕ್ಷವಾಗಿದೆ ಎಂದು ಆರೋಪಿಸಿದರು.
ಸಭೆಯ ಅಧ್ಯಕ್ಷತೆಯನ್ನು ತಾಲೂಕು ಜೆಡಿಎಸ್ ಅಧ್ಯಕ್ಷ ಹೊಸೂರು ಸುರೇಶ್ ವಹಿಸಿದ್ದರು. ಸಭೆಯಲ್ಲಿ ಜೆಡಿಎಸ್ ರಾಜ್ಯ ರೈತ ಮೋರ್ಚದ ಕಾರ್ಯದರ್ಶಿ ಕಣುವೆ ವಿನಯ, ಶೃಂಗೇರಿ ಕ್ಷೇತ್ರದ ಅಧ್ಯಕ್ಷ ದಿವಾಕರ ಭಟ್, ತಾ. ಮಹಿಳಾ ಘಟಕದ ಅಧ್ಯಕ್ಷ ದೀಪಾ ಉಮಾಶಂಕರ್, ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷ ಸುಬಾನ್, ತಾಪಂ ಸದಸ್ಯ ಎಸ್.ಎಸ್. ಶಾಂತಕುಮಾರ್, ಮುಖಂಡರಾದ ಜೋಯಿ, ರಾಜಗೋಪಾಲ ಶೆಟ್ಟಿ, ಕೊಪ್ಪದ ಮುಖಂಡರಾದ ಬದ್ರಿಯಾ ಮಹಮ್ಮದ್, ಆಶಾ ಫೆರಿಸ್ ಉಪಸ್ಥಿತರಿದ್ದರು.
ಹಂತುವಾನಿ, ಬಿ.ಎಚ್. ಕೈಮರ, ಮುತ್ತಿನಕೊಪ್ಪ, ಶೆಟ್ಟಿಕೊಪ್ಪದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಧನಂಜಯಕುಮಾರ್ ಮತಯಾಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

