ಸವಕಲಾದ ದಲಿತರ ಏಳಿಗೆ ಪದ
ಸಾಗರ: ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ದಲಿತರ ಏಳಿಗೆಯೇ ತಮ್ಮ ಪರಮ ಧ್ಯೇಯ ಎಂದು ಕಾಂಗ್ರೆಸ್ ಪಕ್ಷದವರು ಪದೇ ಪದೆ ಉಚ್ಚರಿಸಿ ಆ ಶಬ್ದವನ್ನು ಸವಕಲು ಮಾಡಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.
ಇಲ್ಲಿನ ಬ್ರಾಸಂ ಸಭಾಭವನದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಡಿವಾಳ ಜನಾಂಗದ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷದವರು ಹಿಂದುಳಿದ ವರ್ಗದವರನ್ನು ತಮ್ಮ ಮತ ಬ್ಯಾಂಕ್ ಆಗಿ ಇರಿಸಿಕೊಂಡಿದ್ದರೆ ವಿನಾ ಜನಾಂಗದ ಅಭಿವೃದ್ಧಿಗಾಗಿ ಅವರು ಯಾವತ್ತೂ ಕೆಲಸ ಮಾಡಿಲ್ಲ. ಬಿಜೆಪಿ ಸರ್ಕಾರ ಬಂದ ಮೇಲೆ ಹಿಂದುಳಿದ ವರ್ಗದ ಅಭಿವೃದ್ಧಿಗೆ ನೂರಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯವನ್ನು ತುಂಬುವ ಕೆಲಸ ಮಾಡಿದೆ. ಹಿಂದುಳಿದ ವರ್ಗದ ಅಭಿವೃದ್ಧಿಗೆ ಯಡಿಯೂರಪ್ಪನವರು ಬಜೆಟ್‌ನಲ್ಲಿ ಸಾವಿರ ಕೋಟಿ ರುಪಾಯಿ ಮೀಸಲಿಡುವ ಮೂಲಕ ಬಿಜೆಪಿ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸಿದ್ದಾರೆ ಎಂದರು.
ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಹತ್ತು ವರ್ಷಗಳ ಕೇಂದ್ರದಲ್ಲಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ದುರಾಡಳಿತವನ್ನು ಕೊನೆಗಾಣಿಸಲು ಹಿಂದುಳಿದ ವರ್ಗದವರು ಈ ಬಾರಿ ಬಿಜೆಪಿಯನ್ನು ಬೆಂಬಲಿಸಬೇಕು. ನರೇಂದ್ರ ಮೋದಿ ಹಿಂದುಳಿದ ವರ್ಗದ ಪ್ರಭಾವಿ ನಾಯಕರಾಗಿದ್ದು, ಅವರು ಪ್ರಧಾನ ಮಂತ್ರಿಯಾದರೆ ಎಲ್ಲ ವರ್ಗದವರಿಗೂ ಸಾಮಾಜಿಕ ನ್ಯಾಯ ಸಿಗುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಹಿಂದುಳಿದ ವರ್ಗದ ಸಮಗ್ರ ಅಭಿವೃದ್ಧಿಯಾಗಿದೆ. ಯಡಿಯೂರಪ್ಪನವರು ಲೋಕಸಭಾ ಸದಸ್ಯರಾದರೆ ಇನ್ನಷ್ಟು ಸೌಲಭ್ಯ ಪಡೆಯಲು ಸಾಧ್ಯವಾಗುತ್ತದೆ ಎಂದರು. ಪ್ರಮುಖರಾದ ಕೆ. ಅರುಣ ಪ್ರಸಾದ್, ಚೇತನರಾಜ್ ಕೆ. ಕಣ್ಣೂರು, ಸತೀಶಬಾಬು, ಟಿ.ಡಿ. ಮೇಘರಾಜ್, ರಾಜು ಬಿ. ಮಡಿವಾಳ, ಎಸ್.ಎಲ್. ಮಂಜುನಾಥ್, ಸಿ. ನಾಗರತ್ನ, ಡಿ. ತುಕಾರಾಮ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

