ಶಿವಮೊಗ್ಗ

ಜೆಡಿಎಸ್ ಅಭ್ಯರ್ಥಿ ಗೀತಾ ಬೆಂಬಲಿಸಿ: ಶಾಸಕ ಅಪ್ಪಾಜಿ

Published On :

ಭದ್ರಾವತಿ: ಕ್ಷೇತ್ರದ ಅಭಿವೃದ್ಧಿ ಬಗ್ಗೆ ಗಂಭೀರ ಚಿಂತನೆ ನಡೆಸಿರುವ ಜೆಡಿಎಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರಿಗೆ ಮತದಾರರು ಮತಗಳನ್ನು ನೀಡುವಂತೆ ಶಾಸಕ ಎಂ.ಜೆ.ಅಪ್ಪಾಜಿ ಹೇಳಿದರು.
ಪಟ್ಟಣದ ವಿಐಎಸ್‌ಎಲ್ ಮುಖ್ಯದ್ವಾರದ ಎದುರು ಸೋಮವಾರ ನಡೆದ ಜೆಡಿಎಸ್ ಪ್ರಚಾರ ಭಾಷಣದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಸಿದ ಮತ್ತು ಅಧಿಕಾರ ಸ್ವಹಿತಾಸಕ್ತಿಗೆ ದುರ್ಬಳಕೆ ಮಾಡಿಕೊಂಡ ಬಿಜೆಪಿ ಹಾಗೂ ಅಧಿಕಾರವಿದ್ದರೂ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಮಾಡದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಶಿವಮೊಗ್ಗ ಕ್ಷೇತ್ರದ ಮತದಾರರರು ಮತನೀಡಬಾರದು ಎಂದು ಮನವಿ ಮಾಡಿದರು.  ಅಭ್ಯರ್ಥಿ ಗೀತಾ ಮಾತನಾಡಿ, ತಾವು ಜಿಲ್ಲೆಯಲ್ಲಿ ಹುಟ್ಟಿ ಬೆಳೆದವರಾದ್ದರಿಂದ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅರಿವಿದೆ. ಅದರ ಪರವಾಗಿ ನಿಷ್ಠೆಯಿಂದ ಕಾರ್ಯನಿರ್ವಹಿಸಲಾಗುವುದು. ತಮ್ಮ ತಂದೆಯವರು ಜಿಲ್ಲೆ ಹಾಗೂ ರಾಜ್ಯದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಶಾಸಕ ಅಪ್ಪಾಜಿ ಅವರೊಂದಿಗೆ ಸೇರಿ ಕ್ಷೇತ್ರದ ಜನತೆಗೆ ತಿಳಿಸಿ ಮತಯಾಚನೆ ಮಾಡುವುದಾಗಿ ತಿಳಿಸಿದರು.
ಣಾಮೂರ್ತಿ, ನಟರಾಜ್, ರಾಮಕೃಷ್ಣ, ಆನಂದ್, ಭಾಗ್ಯಶ್ರೀ, ಗುಣಶೇಖರ, ಬದರೀನಾರಾಯಣ, ಸುಧಾಮಣಿ ಮತ್ತು ಮಾಜಿ ಜಿ.ಪಂ. ಸದಸ್ಯ ಯೋಗೇಶ್ ಮೊದಲಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.