ಮಧು ತಂತ್ರಗಾರಿಕೆ ಫಲಿಸದು
ಸೊರಬ: ನಂಜುಂಡಪ್ಪ ವರದಿಯಲ್ಲಿ ಸೊರಬ ತಾಲೂಕು ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ತಾಲ್ಲೂಕು ಎಂದು ಗುರ್ತಿಸಿಕೊಂಡಿದೆ. ಮಧು ಬಂಗಾರಪ್ಪ ಅವರು ಶಾಸಕರಾಗಿ ಒಂದು ವರ್ಷ ಕಳೆಯುತ್ತಾ ಬಂದಿದ್ದರೂ ಇಲ್ಲಿಯ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ಕುಣುಜೆ ಮಂಜುನಾಥಗೌಡ ಹೇಳಿದರು.
ಸೋಮವಾರ ಪಟ್ಟಣದ ಪತ್ರಿಕಾ ಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಸ್. ಬಂಗಾರಪ್ಪನವರ ಅನುಕಂಪ ಹಾಗೂ ಬಗರ್ಹುಕುಂ ಸಾಗುವಳಿದಾರರ ಪರವಾಗಿ ಮೊಸಳೆ ಕಣ್ಣೀರು ಸುರಿಸಿ, ಹಕ್ಕುಪತ್ರ ನೀಡುವುದಾಗಿ ಸುಳ್ಳು ಭರವಸೆ ನೀಡಿ ಗೆದ್ದು ಬಂದ ಮಧು ಬಂಗಾರಪ್ಪ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಮ್ಮ ಸಹೋದರಿ ಗೀತಾ ಶಿವರಾಜ್ಕುಮಾರ್ ಅವರನ್ನು ಕಣಕ್ಕಿಳಿಸುವ ಮತ್ತೊಮ್ಮೆ ಹಳೆಯ ತಂತ್ರಗಾರಿಕೆಯನ್ನು ಮುಂದುವರೆಸಿದ್ದಾರೆ ಎಂದು ಟೀಕಿಸಿದರು. ಸರ್ವರಿಗೂ ಸಮಬಾಳು-ಸಮಪಾಲು ಎನ್ನುವ ಧ್ಯೇಯದೊಂದಿಗೆ ರಾಜಕಾರಣದಲ್ಲಿ ತನ್ನದೇ ಆದ ಛಾಪು ಮೂಡಿಸಿ, ಉತ್ತರ ಪ್ರದೇಶದಲ್ಲಿ ಉತ್ತಮ ಆಡಳಿತ ನಡೆಸಿದ ಮಾಯಾವತಿ ಈ ದೇಶದ ಪ್ರಧಾನಿಯಾಗಬೇಕು ಎನ್ನುವುದು ಬಹುಜನರ ಅಪೇಕ್ಷೆಯಾಗಿದೆ. ಹಾಗಾಗಿ ದೇಶ ಆಳುವ ಸಾಮರ್ಥ್ಯ ಇರುವುದು ಮಾಯಾವತಿಗೆ ಮಾತ್ರ ಎಂದ ಅವರು ಹೇಳಿದರು.
ಸುದ್ಧಿಗೋಷ್ಠಿಯಲ್ಲಿ ತಾಲೂಕು ಬಿಎಸ್ಪಿ ಅಧ್ಯಕ್ಷ ಎಲ್.ಜಿ. ಗುಡ್ಡಪ್ಪ ಬಂಕವಳ್ಳಿ, ತೀರ್ಥಹಳ್ಳಿ ತಾಲ್ಲೂಕು ಅಧ್ಯಕ್ಷ ಎಂ.ಎಸ್. ದೇವದಾಸ್, ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಶಂಕರಮ್ಮ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

