ಶಿವಮೊಗ್ಗ

ಜೆಡಿಎಸ್ ಮುಗಿದ ಅಧ್ಯಾಯ: ಜೆಡಿಯು ಅಭ್ಯರ್ಥಿ ಧರ್ಮಪ್ಪ

Published On :

ಶಿವಮೊಗ್ಗ: ಜೆಡಿಎಸ್ ಮುಗಿದು ಹೋದ ಪಕ್ಷ. ಇದೀಗ ಸಿನಿಮಾದ ಗುಂಗಿನಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ಇವರನ್ನು ಜನ ಗೆಲ್ಲಿಸಬೇಕೆ. ಅದೇ ರೀತಿ ಜೈಲಿಗೆ ಹೋಗಿಬಂದ ಯಡಿಯೂರಪ್ಪನವರನ್ನು ಜನರು ಗೆಲ್ಲಿಸುತ್ತಾರೆಯೇ ಎಂದು ಜೆಡಿಯು ಅಭ್ಯರ್ಥಿ ಧರ್ಮಪ್ಪ ಪ್ರಶ್ನಿಸಿದ್ದಾರೆ.
 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಅಭ್ಯರ್ಥಿ ಬಗ್ಗೆ ವೈಯಕ್ತಿಕವಾಗಿ ನನಗೆ ಗೌರವವಿದೆ. ಆದರೆ, ಅವರು  ಏನೂ ಮಾಡದೇ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇಂತಹವರಿಂದ ಕ್ಷೇತ್ರಕ್ಕೆ ಏನು ನಿರೀಕ್ಷಿಸಲು ಸಾಧ್ಯ ಎಂದು ತರಾಟೆಗೆ ತೆಗೆದುಕೊಂಡರು.
 ತಂದೆ ಹೆಸರಿನಲ್ಲಿ ಕಣಕ್ಕಿಳಿದಿರುವ ಜೆಡಿಎಸ್ ಅಭ್ಯರ್ಥಿ, ತಂದೆ ಹೆಸರಿನಲ್ಲಿ ವೋಟು ಕೇಳುತ್ತಿದ್ದಾರೆ. ಅವರು ಗೆದ್ದರೆ ಯಾರಿಗೆ ಕೆಲಸ ಮಾಡಿಕೊಡುತ್ತಾರೆ ಎಂದು ಲೇವಡಿ ಮಾಡಿದರಲ್ಲದೇ, ಜೆಡಿಎಸ್‌ನ ಭದ್ರಕೋಟೆ ಎಂದು ಭಾವಿಸಿದಂತಿದೆ. ಆದರೆ ಜೆಡಿಎಸ್ ಮುಗಿದ ಅಧ್ಯಾಯ ಎಂದು ಹೇಳಿದರು.
 ಜೆಡಿಯುಗೆ ಭಾರೀ ಜನಬೆಂಬಲವಿದೆ. ಪ್ರಚಾರಕ್ಕೆಂದು ಹೋದಲ್ಲೆಲ್ಲಾ ಬೆಂಬಲ ವ್ಯಕ್ತವಾಗುತ್ತಿದೆ. ಜನ ಬದಲಾವಣೆ ನಿರೀಕ್ಷಿಸುತ್ತಿದ್ದಾರೆ ಎಂದರು. ಈ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಹಲವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.