ಶಿವಮೊಗ್ಗ

ಮೋದಿ ಅಭಿವೃದ್ಧಿ ಹರಿಕಾರ ಅಲ್ಲ: ಭಂಡಾರಿ

Published On :

ಸೊರಬ: ನರೇಂದ್ರ ಮೋದಿ ಅಭಿವೃದ್ಧಿಯ ಹರಿಕಾರ ಎಂದು ಸ್ವಯಂ ಬಿಂಬಿಸುತ್ತಿರುವ ಬಿಜೆಪಿಯವರು ಜನತೆಗೆ ಸುಳ್ಳು ಸಂದೇಶ ರವಾನಿಸುತ್ತಿದ್ದಾರೆ ಎಂದು ಶಿವಮೊಗ್ಗ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಕುಟುಕಿದರು.
ತಾಲೂಕಿನ ಕುಪ್ಪಗಡ್ಡೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಪಕ್ಷದ ಸ್ವಸಾಮರ್ಥ್ಯದ ಮೇಲೆ ಚುನಾವಣೆ ಎದುರಿಸದ ಬಿಜೆಪಿ ಒಬ್ಬ ಸರ್ವಾಧಿಕಾರಿಯ ಹೆಸರನ್ನು ಮುಂದಿಟ್ಟುಕೊಂಡು ಪ್ರಚಾರ ಕಾರ್ಯದಲ್ಲಿ ತೊಡಗಿರುವುದು ಆ ಪಕ್ಷದ ನೈತಿಕತೆ ಬಿಂಬಿಸುತ್ತದೆ ಎಂದು ಲೇವಡಿ ಮಾಡಿದರು.
ಗುಜರಾತ್‌ನಲ್ಲಿ ಬಡತನ, ದಾರಿದ್ರ್ಯವಿದ್ದು, ನಿರ್ಗತಿಕರಾಗಿಯೇ ಉಳಿದಿದ್ದಾರೆ. ಇದನ್ನೇ ಅಭಿವೃದ್ಧಿ ಎಂದು ಬಿಂಬಿಸಲಾಗುತ್ತಿದೆ. ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿ.ಎಸ್. ಯಡಿಯೂರಪ್ಪ ಅವರನ್ನು ಮೋದಿ ತನ್ನ ಪಕ್ಕದಲ್ಲಿಯೇ ಕುಳ್ಳಿರಿಸಿಕೊಂಡು ಭ್ರಷ್ಟಾಚಾರದ ಬಗ್ಗೆ ಮಾಡನಾಡುತ್ತಾರೆ. ಹಾಗಾಗಿ ಇಡೀ ಬಿಜೆಪಿಯೇ ಭ್ರಷ್ಟರ ಕೂಪವಾಗಿರುವಾಗ ರಾಜ್ಯದ ಜನತೆಯ ಮತ ಕೇಳುವ ನೈತಿಕತೆ ಇಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.