ಸರ್ಕಾರದ ಜನಪರ ಯೋಜನೆ ಗೆಲವಿಗೆ ಶ್ರೀರಕ್ಷೆ: ಭಂಡಾರಿ
ಸಾಗರ: ಕೇಂದ್ರ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳು ನನ್ನ ಗೆಲುವಿನಲ್ಲಿ ಪ್ರಮುಖಪಾತ್ರ ವಹಿಸಲಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಹೇಳಿದರು.
ಇಲ್ಲಿನ ನೆಹರೂ ನಗರದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರಚಾರ ಸಭೆಯನ್ನು ಕಾಂಗ್ರೆಸ್ ಧ್ವಜ ಬೀಸುವ ಮೂಲಕ ಉದ್ಘಾಟಿಸಿ, ಲೋಕಸಭಾ ಚುನಾವಣೆಯಲ್ಲಿ ನಾನು ಯಾವ ಪಕ್ಷ ಅಥವಾ ಅಭ್ಯರ್ಥಿಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಹೇಳಿದರು.
ಬೆಂಬಲ ಬೇಕು: ಯಾವುದೆ ಒಂದು ಜನಾಂಗದ ಮತ ಪಡೆಯುವುದರಿಂದ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಿಲ್ಲ. ಎಲ್ಲ ವರ್ಗಗಳ ಮತ ಸಿಕ್ಕಾಗ ಮಾತ್ರ ಗೆಲುವು ಸಾಧ್ಯವಾಗುತ್ತದೆ. ಜಿಲ್ಲೆಯಲ್ಲಿ ನನ್ನ ಪರವಾಗಿ ಈಗಾಗಲೆ ಎಸ್.ಎಂ.ಕೃಷ್ಣ, ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು, ಮತದಾರರ ಮನವೊಲಿಸುವ ಕೆಲಸ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರೇ ಸ್ಟಾರ್ ಕ್ಯಾಂಪನೇರ್‌ಗಳು. ಪಕ್ಷವನ್ನು ಸದೃಢಗೊಳಿಸುವಲ್ಲಿ ಕಾರ್ಯಕರ್ತರ ಶ್ರಮ ಅಪಾರವಾಗಿದೆ ಎಂದು ಹೇಳಿದರು.
ನನ್ನ ಗೆಲವು ಖಚಿತ: ಕುಮಾರ್ ಬಂಗಾರಪ್ಪ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ನಮ್ಮ ನಡುವೆ ಯಾವುದೆ ವೈಮನಸ್ಯವಿಲ್ಲ. ಪಕ್ಷದ ಹೈಕಮಾಂಡ್ ನನ್ನನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದ ಮೇಲೆ ಮತದಾರರು ನನ್ನ ಮೇಲಿನ ಸಿಟ್ಟು ಮರೆತಿದ್ದಾರೆ. ಗೆಲುವು ಖಚಿತ ಎನ್ನುವ ವಾತಾವರಣ ನಿಚ್ಚಳವಾಗಿದೆ ಎಂದು ಹೇಳಿದರು.
ಕೆಪಿಸಿಸಿ ವಕ್ತಾರ ಕೆ.ದಿವಾಕರ್, ಜಿಲ್ಲಾ ವಕ್ತಾರ ತೀ.ನ.ಶ್ರೀನಿವಾಸ್, ಸೈಯದ್ ವಹಿದ್, ಭೀಮನೇರಿ ಶಿವಪ್ಪ, ಅಬ್ದುಲ್ ಹಮೀದ್, ಮಹಮದ್ ಜಕ್ರಿಯಾ, ನಗರಸಭೆ ಅಧ್ಯಕ್ಷೆ ಎನ್.ಲಲಿತಮ್ಮ, ಸದಸ್ಯರಾದ ತಸ್ರೀಫ್, ಫ್ರಾನ್ಸಿಸ್ ಗೋಮ್ಸ್, ನಾದಿರಾ, ಪ್ರಮುಖರಾದ ಮಲ್ಲಿಕಾಜರುನ ಹಕ್ರೆ, ತಾರಾಮೂತರ್, ಡಿ.ದಿನೇಶ್, ಮೈಕೆಲ್ ಡಿಸೋಜ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

