ಜನಪರ ಯೋಜನೆಯೇ ಪಕ್ಷದ ಗೆಲವಿಗೆ ಶ್ರೀರಕ್ಷೆ
ಹಿರಿಯೂರು: ಕಳೆದ ಐದುವರೆ ವರ್ಷಗಳಲ್ಲಿ ತಾಲೂಕಿನಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾರ್ಯಗಳು ಮತ್ತು ರಾಜ್ಯ ಸರ್ಕಾರದ ಜನಪ್ರಿಯತೆ ಆಧಾರದ ಮೇಲೆ ಕಾಂಗ್ರೆಸ್ ಹಿರಿಯೂರು ಕ್ಷೇತ್ರದಲ್ಲಿ ಅತಿಹೆಚ್ಚು ಮತಗಳನ್ನು ಪಡೆಯಲಿದೆಯೆಂದು ಶಾಸಕ ಡಿ.ಸುಧಾಕರ್ ಹೇಳಿದರು.
ಪಟ್ಟಣದಲ್ಲಿಂದು ಕರೆಯಲಾಗಿದ್ದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ತಾಲೂಕಿನಲ್ಲಿ ಅಭಿವೃದ್ಧಿ ಕೆಲಸಗಳಿಗೆ ಸಾವಿರಾರು ಕೋಟಿ ರು. ಅನುದಾನ ಬಳಸಲಾಗಿದೆ. ಶಿಕ್ಷಣ,ಕುಡಿಯುವ ನೀರು, ಮತ್ತು ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಶ್ರಮ ಹಾಕಲಾಗಿದೆಯೆಂದರು.
ನೀರು ಪೂರೈಕೆ: ಅನೇಕ ಸರ್ಕಾರ ಶಿಕ್ಷಣ ಸಂಸ್ಥೆಗಳು, ವಸತಿ ಶಾಲೆಗಳ ಸಮುಚ್ಚಯಗಳು, ತೋಟಕಾರಿಕಾ ವಿ.ವಿ.ಯೂ ಸೇರಿದಂತೆ ತಾಂತ್ರಿಕ ಶಿಕ್ಷಣ ಕೋರ್ಸ್ ಗಳಿರುವ ಸಂಸ್ಥೆಗಳನ್ನು ಸಹ ತಾಲೂಕಿನಲ್ಲಿ ಸ್ಥಾಪಿಸಲಾಗಿದೆ. ಹಾಗೆಯೇ ವಿ.ವಿ.ಸಾಗರ ಜಲಾಶಯದಿಂದ ಪಟ್ಟಣಕ್ಕೆ ಪೈಪ್ಲೈನ್ ಮೂಲಕ ಕುಡಿಯುವ ನೀರು ಕಲ್ಪಿಸುವ 43 ಕೋಟಿಗಳ ವೆಚ್ಚದ ಕಾಮಗಾರಿ ಭರದಿಂದ ಸಾಗುತ್ತಿದ್ದು,ಇನ್ನು ಕೆಲವೇ ತಿಂಗಳಲ್ಲಿ ಪಟ್ಟಣದ ಜನರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆಯೆಂದು ಹೇಳಿದರು.
ಪ್ರಸ್ತುತ ದಿನಗಳಲ್ಲಿ ನಡೆಯುತ್ತಿರುವ ಚುನಾವಣೆಯು ರಾಷ್ಟ್ರದ ಹಿತದೃಷ್ಟಿಯಿಂದ ಅತ್ಯಂತ ಮಹತ್ವದ ಚುನಾವಣಾ ಪ್ರಕ್ರಿಯೆಯಾಗಿದ್ದು, ದೇಶದ ಜನಸಾಮಾನ್ಯರ ಹಿತಕಾಯುವ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವನ್ನು ಮರುಸ್ಥಾಪಿಸಲು ಜನರು ಕಾಂಗ್ರೆಸ್ಗೆ ಮತ ನೀಡುವುದು ಅನಿವಾರ್ಯವಾಗಿದೆಯೆಂದರು. ಸಚಿವ ಎಚ್.ಆಂಜನೇಯ, ಟಿ.ಬಿ. ಜಯಚಂದ್ರ, ಶಾಸಕ ವೆಂಕಟರಮಣಪ್ಪ, ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ, ಜಿಪಂ ತಾಪಂ ಮತ್ತು ಪುರಸಭೆ ಜನಪ್ರತಿನಿಧಿಗಳು ಭಾಗವಹಿಸುವುದಾಗಿ ತಿಳಿಸಿದರು. ಬ್ಲಾಕ್ಕಾಂಗ್ರೆಸ್ ಅಧ್ಯಕ್ಷ ಸಿ.ತಿಪ್ಪೇಸ್ವಾಮಿ, ಕೆಪಿಸಿಸಿ ಸದಸ್ಯರಾದ ಜಿ.ಎಸ್. ಮಂಜುನಾಥ್,ಅರ್ಬನ್ ಬ್ಯಾಂಕ್ ಅಧ್ಯಕ್ಷ ಮಾಧವ, ವೀರಭದ್ರಬಾಬು,ಡಿಸಿಸಿ ಬ್ಯಾಂಕ್ ನಿರ್ದೇಶಕ ಕಂದಿಕೆರೆ ಸುರೇಶ್ಬಾಬು, ಪುರಸಭೆ ಉಪಾಧ್ಯಕ್ಷ ರವಿಚಂದ್ರನಾಯ್ಕ್, ವಕೀಲ ವಿ.ರಂಗಸ್ವಾಮಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

