ತಂದೆಯ ಕನಸು ಸಾಕಾರಕ್ಕೆ ಮತ ನೀಡಿ: ಗೀತಾ
ಹೊಸನಗರ: ತಮ್ಮ ತಂದೆ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಅಭಿವೃದ್ಧಿ ಪರ ಯೋಜನೆಗಳ ಕನಸು ಸಾಕಾರಗೊಳಿಸಲು ತಮ್ಮನ್ನು ಬೆಂಬಲಿಸುವಂತೆ ಲೋಕಸಭಾ ಜೆಡಿಎಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಮನವಿ ಮಾಡಿದರು.
ಪಟ್ಟಣದಲ್ಲಿ ಸೋಮವಾರ ರೋಡ್ ಶೋ ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಚುನಾವಣಾ ಪ್ರಚಾರ ಭಾಷಣ ಮಾಡಿದರು.
ಬೇರೆ ಪಕ್ಷದ ಅಭ್ಯರ್ಥಿಗಳನ್ನು ದೂರು ಪ್ರಶ್ನೆ ಇಲ್ಲ. ಬಂಗಾರಪ್ಪ ಇವರ ಆರಾಧನ, ಆಶ್ರಯ, ಅಕ್ಷಯ, ಯೋಜನೆಗಳನ್ನು ನಂತರ ಬಂದ ಸರ್ಕಾರಗಳು ಮರೆತಿದೆ. ತಮ್ಮ ಈ ಬಾರಿ ಚುನಾವಣೆಯಲ್ಲಿ ಗೆಲ್ಲಿಸಿದಲ್ಲಿ ಅವುಗಳಿಗೆ ಮರು ಚಾಲನೆ ನೀಡುವುದಾಗಿ ಭರವಸೆ ನೀಡಿದರು.
ಚಿತ್ರ ನಟ ಶಿವರಾಜ್ಕುಮಾರ್ ಮಾತನಾಡಿ, ತಮ್ಮ ಪತ್ನಿ ಹೊರಗಿನವರು ಎಂದು ವಿರೋಧ ಪಕ್ಷದವರು ಬಿಂಬಿಸಲಾಗುತ್ತಿದೆ. ಇದೇ ಜಿಲ್ಲೆಯಲ್ಲಿ ಹುಟ್ಟಿ, ಬೆಳೆದ ಗೀತಾ ಇವರಿಗೆ ಮತ ನೀಡುವಂತೆ ಕೋರಿದರು. ಚಲನ ಚಿತ್ರ ನಟರಾದ ವಿಜಯ ರಾಘವೇಂದ್ರ, ಚಿತ್ರ ಮುರಳಿ ಗೀತಾ ಪರ ಮತ ಯಾಚನೆ ಮಾಡಿ ಮಾತನಾಡಿದರು.
ಜೆಡಿಎಸ್ ಪ್ರಮುಖರಾದ ಕೆ.ಎಂ. ಕೃಷ್ಣಮೂರ್ತಿ, ಬಿ.ಜಿ. ನಾಗರಾಜ್, ಚಾಬು ಸಾಬ್, ವರ್ತೇಶ್ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

