ಶಿವಮೊಗ್ಗ

'ನೋಟಾ' ಮೂಲಕ ಪಾಠ ಕಲಿಸಿ: ಲೋಕೇಶ್

Published On :

ಶಿವಮೊಗ್ಗ: ಜನಪ್ರತಿನಿಧಿಗಳು ಜನರನ್ನು ನಿರ್ಲಕ್ಷಿಸಿದ್ದಾರೆ. ರೈತರ ಸಂಕಷ್ಟಗಳು ಪರಿಹಾರವಾಗಿಲ್ಲ. ಆದ್ದರಿಂದ ಈ ಬಾರಿ ಚುನಾವಣೆಯಲ್ಲಿ ಆಯೋಗವೇ ಅವಕಾಶ ನೀಡಿರುವ ನೋಟಾ (ನನ್ ಆಫ್ ದಿ ಎಬೋ) ಬಟನ್ ಬಳಸಿ ಅವರಿಗೆ ಪಾಠ ಕಲಿಸಿ ಜಿಲ್ಲಾ ಭೂ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ಲೋಕೇಶ್ ಈಸೂರು ಹೇಳಿದ್ದಾರೆ.
ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡದ ವಚನ ಭ್ರಷ್ಟರು ಕೋಮುವಾದಿ ಮತ್ತು ಜಾತಿವಾದಿಗಳನ್ನು ಲೋಕಸಭಾ ಚುನಾವಣೆಯಲ್ಲಿ ಮತದಾರರು ತಿರಸ್ಕರಿಸಬೇಕು ಎಂದಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು, ಅಭ್ಯರ್ಥಿಗಳು ಯೋಗ್ಯರಲ್ಲದಿದ್ದರೆ ನೋಟಾ ಗುಂಡಿ ಒತ್ತಲು ಆಯೋಗ ಮತದಾರರನ್ನು ಜಾಗೃತಿ ಮೂಡಿಸಬೇಕು. ಆದರೆ, ಆಯೋಗ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿಲ್ಲ ಎಂದು ಆಕ್ಷೇಪಿಸಿದರು.
ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ಜನರ ಮುಂದೆ ಹೋಗಲು ಮುಖವಿಲ್ಲದಂತಾಗಿದೆ. ಮಲೆನಾಡಿನ ಕಂದಾಯ ಮತ್ತು ಅರಣ್ಯ ಜಮೀನುಗಳಲ್ಲಿ ಬಗರ್‌ಹುಕುಂ ಸಾಗುವಳಿ ಮಾಡಿಕೊಂಡು ಬದುಕು ಕಟ್ಟಿಕೊಂಡಿರುವ ಲಕ್ಷಾಂತರ ಕುಟುಂಬಗಳು ಭೂಮಿ ಕಳೆದುಕೊಳ್ಳುವ ಆತಂಕದಲ್ಲಿವೆ. ಜನರಿಗೆ ಮಾರಕವಾಗುವಂತೆ ಕರ್ನಾಟಕ ಭೂಕಂದಾಯ ಅಧಿನಿಯಮಕ್ಕೆ ತಿದ್ದುಪಡಿ ತರಲಾಗಿದೆ ಎಂದಿದ್ದಾರೆ.
ಚುನಾವಣೆ ನಂತರ ಬಗರ್‌ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಅರಣ್ಯ ಇಲಾಖೆಯು ಪೊಲೀಸ್ ಇಲಾಖೆಯೊಂದಿಗೆ ತಯಾರಿ ಮಾಡಿಕೊಂಡಿವೆ. ಎಲ್ಲಾ ರಾಜಕೀಯ ಪಕ್ಷಗಳು ಸಾಗುವಳಿದಾರರಿಗೆ ಹಕ್ಕುಪತ್ರ ಕೊಡುತ್ತೇವೆ ಎಂದು ಹೇಳುವ ಧೈರ್ಯವಿಲ್ಲ. ಮತ ಕೇಳಲು ನೈತಿಕತೆ ಉಳಿಸಿಕೊಂಡಿಲ್ಲ ಎಂದಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಮುಖರಾದ ಗಣೇಶ್ ಬೆಳ್ಳಿ, ಸದಾಶಿವಪ್ಪ, ಶಂಕರಪ್ಪ, ಮಂಜನಾಯ್ಕ, ಅಣ್ಣಪ್ಪ, ಗಿರೀಶ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.