ಶಿವಮೊಗ್ಗ

ಭಂಡಾರಿ ಪರ ಫರ್ನಾಂಡೀಸ್ ರೋಡ್ ಶೋ

Published On :

ಶಿವಮೊಗ್ಗ:  ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಅವರ ಪರ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಅವರು ಮಂಗಳವಾರ ನಗರದ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ನಡೆಸಿದರು.
ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಆರಂಭಗೊಂಡ ರೋಡ್ ಶೋ ಗಾಂಧಿಬಜಾರ್, ಬಿ.ಹೆಚ್. ರಸ್ತೆ, ನೆಹರೂ ರಸ್ತೆ, ಜೈಲ್ ರಸ್ತೆ ಮೂಲಕ ಲಕ್ಷ್ಮೀ ಟಾಕೀಸ್ ವೃತ್ತದ ವರೆಗೆ ನಡೆಯಿತು.
ಈ ಸಂದರ್ಭ ಮಾತನಾಡಿದ ಆಸ್ಕರ್ ಫರ್ನಾಂಡೀಸ್, ಯುಪಿಎ ಸರ್ಕಾರವು ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಕೋಟ್ಯಂತರ ಜನರು ಫಲಾನುಭವಿಗಳಾಗಿದ್ದಾರೆ. ಹಾಗಾಗಿ ಈ ಬಾರಿ ಮತ್ತೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಬರುವುದು ಖಚಿತ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಜನಪರ ಆಡಳಿತ ಸಾಧ್ಯ ಎಂದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿಯವರು ಕ್ರಿಯಾಶೀಲ ವ್ಯಕ್ತಿತ್ವದ ಸಜ್ಜನ ಅಭ್ಯರ್ಥಿ. ಇವರು ಸಂಸದರಾಗಿ ಆಯ್ಕೆಯಾದಲ್ಲಿ ಕ್ಷೇತ್ರದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಯುಪಿಎ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಹಸಿವುಮುಕ್ತ ಭಾರತ ನಿರ್ಮಾಣಕ್ಕಾಗಿ ವಿಶ್ವದ ಯಾವ ರಾಷ್ಟ್ರವೂ ಜಾರಿಗೊಳಿಸಲಾಗದ ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದಿದೆ. ನರೇಗಾದಂತಹ ಯೋಜನೆಯಿಂದ ಕೋಟ್ಯಂತರ ಜನರಿಗೆ ಉದ್ಯೋಗ ದೊರಕಿಸಿಕೊಟ್ಟು ಜನರ ಹಸಿವು ನೀಗಿಸಿದೆ. ಕಾರ್ಮಿಕರಿಗಾಗಿ ವಿಶೇಷ ಯೋಜನೆಗಳನ್ನು ರೂಪಿಸಿದೆ ಎಂದು ಹೇಳಿದರು.
ಅಭ್ಯರ್ಥಿ ಮಂಜುನಾಥ ಭಂಡಾರಿ, ಶಾಸಕ ಕೆ.ಬಿ. ಪ್ರಸನ್ನಕುಮಾರ್, ಆರ್. ಪ್ರಸನ್ನಕುಮಾರ್, ಜಿತೇಂದ್ರ ದೇಶ್‌ಪ್ರಭು ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.