ಶಿವಮೊಗ್ಗ

ತಮಿಳು ಸಂಘಟನೆಗಳ ಒಕ್ಕೂಟ ಬೆಂಬಲ

Published On :

ಶಿವಮೊಗ್ಗ: ಜಿಲ್ಲಾ ತಮಿಳು ಸಂಘಟನೆಗಳ ಒಕ್ಕೂಟವು ಸಭೆ ನಡೆಸಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಂಬಲಿಸುವ ತೀರ್ಮಾನ ಕೈಗೊಂಡಿದೆ.
ಎನ್. ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಒಕ್ಕೂಟದ ರಾಜ್ಯ ಸಂಚಾಲಕ ಎಂ.ಪಿ. ಸಂಪತ್ ಅವರು ಮಾತನಾಡಿ, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ತಮಿಳರ ಪರವಾಗಿ ಹಲವು ಕ್ರಮ ಕೈಗೊಂಡಿದ್ದು, ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದರು.
20 ವರ್ಷಗಳ ಕಾಲ ನೆನೆಗುದಿಗೆ ಬಿದ್ದಿದ್ದ ಪ್ರತಿಮೆಗಳ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿದರು. ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಹಾಗೂ ಚೆನೈನಲ್ಲಿ ಸರ್ವಜ್ಞ ಪ್ರತಿಮೆ ಅನಾವರಣಗೊಳಿಸಿ ಕನ್ನಡಿಗರು ಹಾಗೂ ತಮಿಳರ ನಡುವೆ ಸಹೋದರ ಬಾಂಧವ್ಯ ಮೂಡಲು ಯಡಿಯೂರಪ್ಪ ಕಾರಣರಾದರು ಎಂದ ಅವರು, ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿರುವ ಯಡಿಯೂರಪ್ಪ ಅವರು ರಾಜ್ಯದಲ್ಲಿ ತಮಿಳು ಸಮಾಜದ ವತಿಯಿಂದ ನಿರ್ಮಿಸಲಾದ ಸಮುದಾಯ ಭವನಗಳು, ಶಾಲಾ ಕಟ್ಟಡಗಳಿಗೆ ಅನುದಾನ ನೀಡಿದ್ದಾರೆ ಎಂದರು. ಸಭೆಯಲ್ಲಿ ತಮಿಳು ತಾಯ್ ಸಂಘದ ಅಧ್ಯಕ್ಷ ಡಿ. ರಾಜಶೇಖರಪ್ಪ, ಮಾಚೇನಹಳ್ಳಿ ಕೈಗಾರಿಕಾ ಸಂಘದ ಅಧ್ಯಕ್ಷ ಎಂ. ರಾಜು, ತಮಿಳು ಸೇವಾ ಸಂಘದ ಅಧ್ಯಕ್ಷ ಪಿ. ವೆಂಕಟೇಶ್, ತಮಿಳು ಯುವಕ ಸಂಘದ ಉಪಾಧ್ಯಕ್ಷ ಎಸ್. ಮಂಜುನಾಥ್, ಬಾಲಸುಬ್ರಹ್ಮಣ್ಯ ಸೇವಾ ಸಮಿತಿ ಅಧ್ಯಕ್ಷ ಕೆ. ಸುಬ್ರಮಣಿ, ಭಾರತಿದಾಸನ್ ಶಾಲಾ ಸಮಿತಿ ಗೌರವಾಧ್ಯಕ್ಷ ಪಿ. ನೀಲಮೇಗಂ, ವಿವಿಧ ಸಂಘಟನೆ ಪದಾಧಿಕಾರಿಗಳಾದ ಎನ್. ಲವಕುಮಾರ್, ಎನ್. ಕುಮಾರ್, ವಿ. ಸುಂದರ್, ಜಯರಾಂ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.