ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ
ಭದ್ರಾವತಿ: ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಎಂದು ಕೆಲವರು ಬೊಬ್ಬೆ ಹೊಡೆಯುತ್ತಿದ್ದು, ದೇಶದಲ್ಲಿ ಪ್ರಪ್ರಥಮ ಬಾರಿಗೆ ಅಲ್ಪಸಂಖ್ಯಾತರ ಪ್ರತಿನಿಧಿಯಾದ ಡಾ. ಎಪಿಜೆ ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ ಹೆಗ್ಗಳಿಕೆ ಬಿಜೆಪಿಯದ್ದು ಎಂದು ಪಕ್ಷದ ಭದ್ರಾವತಿ ಕ್ಷೇತ್ರ ಘಟಕದ ಬಿ. ಸದಾವಲಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಅಬ್ದುಲ್ ನವೀದ್ ಹಾಗೂ ಸ್ಥಳೀಯ ಘಟಕದ ಮಾಧ್ಯಮ ಪ್ರಮುಖ್ ಕೃಷ್ಣಮೂರ್ತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಚಿವ ಕಿಮ್ಮನೆ ರತ್ನಾಕರ್ ಜಿಲ್ಲೆಯ ಅಲ್ಪಸಂಖ್ಯಾತರಿಗೆ ಕಿಂಚಿತ್ತೂ ಸವಲತ್ತನ್ನು ಕೊಟ್ಟಿಲ್ಲ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸುಮಾರು 470 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರಲ್ಲದೆ ಬೆಂಗಳೂರಿನಲ್ಲಿ ಹಜ್ ಯಾತ್ರಿಗಳಿಗೆ ಅನುಕೂಲವಾಗುವಂತೆ ಹಜ್ ಮಹಲ್ ನಿರ್ಮಾಣ ಮಾಡಲು 5 ಎಕರೆ ಜಾಗ ನೀಡಿದ್ದಾರಲ್ಲದೆ ಮಹಲ್ ನಿರ್ಮಾಣಕ್ಕೆ 40 ಕೋಟಿ ಸಹ ಬಿಡುಗಡೆ ಮಾಡಲು ಕಾರಣಕರ್ತರಾಗಿದ್ದಾರೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

