ಶಿವಮೊಗ್ಗ

ಬಸವ ಜಯಂತಿ ಅದ್ಧೂರಿ ಆಚರಣೆಗೆ ನೀತಿ ಸಂಹಿತೆ ಅಡ್ಡಿ

Published On :

ಶಿವಮೊಗ್ಗ: ಈ ಬಾರಿ ಬಸವ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಬೇಕೇ ಅಥವಾ ಸರಳ ಆಚರಣೆ ಸಾಕೇ- ಹೀಗೊಂದು ಜಿಜ್ಞಾಸೆ ಜಿಲ್ಲಾಡಳಿತಕ್ಕೆ ಉಂಟಾಗಿದೆ. ಮತದಾನ ಮುಗಿದಿದ್ದರೂ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಬಗ್ಗೆ ಸಲಹೆ ಕೋರಿ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.
ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಬಸವ ಜಯಂತಿ ಕಾರ್ಯಕ್ರಮವನ್ನು ಪ್ರತಿ ವರ್ಷದಂತೆ ಈ ವರ್ಷವೂ ವಿಜೃಂಭಣೆಯಿಂದ ಆಚರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಹಾಗೂ ಗುರುವಾರ ಅಪರ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಸಮುದಾಯದ ಮುಖಂಡರು ನೀಡಿದ ಸಲಹೆ ಮೇರೆಗೆ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.
ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಬಸವ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲು ಜಿಲ್ಲಾಡಳಿತ ಸಭೆ ಪ್ರಸ್ತಾಪಿಸಿತು.
ರಾಜ್ಯದಲ್ಲಿ ಮತದಾನದ ಪ್ರಕ್ರಿಯೆ ಮುಗಿದಿರುವುದರಿಂದ ಬಸವಜಯಂತಿ ಕಾರ್ಯಕ್ರಮ ಎಲ್ಲಾ ಸಮುದಾಯದ ಹಬ್ಬವಾಗಿರುವುದರಿಂದ ಪ್ರತಿವರ್ಷದಂತೆ ಸರ್ಕಾರದ ಶಿಷ್ಟಾಚಾರದಂತೆ ಆಚರಿಸಬಹುದು. ಈ ಬಗ್ಗೆ ಚುನಾವಣಾ ಆಯೋಗದ ಸಮ್ಮತಿ ಪಡೆಯಬಹುದೇ ಎಂಬ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಒಂದೊಮ್ಮೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಗೊಳಿಸದಿದ್ದರೆ ಜಿಲ್ಲಾಡಳಿತದಿಂದ ಸರಳ ಆಚರಣೆಗೂ ಹಾಗೂ ಸಂಜೆ ವೀರಶೈವ ಸಮುದಾಯದಿಂದ ಖಾಸಗಿ ಕಾರ್ಯಕ್ರಮವಾಗಿ ಬಸವಜಯಂತಿ ಕಾರ್ಯಕ್ರಮ ಆಚರಿಸಲು ಸಭೆಯಲ್ಲಿ ಸಮ್ಮತಿಸಲಾಯಿತು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಜಿಲ್ಲಾ ವಾರ್ತಾಧಿಕಾರಿ ಹಿಮಂತರಾಜು ಜಿ., ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಎನ್. ಬಾಲರಾಜ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವೀರಶೈವ ಸಮುದಾಯದ ಎಲ್ಲಾ ಮುಖಂಡರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.