ಶಿವಮೊಗ್ಗ

ರಾಂದೇವ್ ವಿರುದ್ಧ ಕ್ರಮಕ್ಕೆ ಆಗ್ರಹ

Published On :

ಶಿವಮೊಗ್ಗ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕುರಿತು ಹೇಳಿಕ ನೀಡಿರುವ ಯೋಗ ಗುರು ಬಾಬಾ ರಾಮ್‌ದೇವ್ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಅರ್ಪಿಸಿದರು.
ರಾಮ್‌ದೇವ್ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ಈ ಕೂಡಲೇ ಸಾರ್ವಜನಿಕವಾಗಿ ರಾಮ್ದೇವ್ ಅವರು ರಾಹುಲ್ ಗಾಂಧಿಯವರ ಕ್ಷಮೆಯಾಚಿಸುವಂತೆ ಆಗ್ರಹಿಸಿದರು.
ರಾಹುಲ್ ಗಾಂಧಿಯವರು ಪರಿಶಿಷ್ಟ ಜಾತಿಯವರ ಮನೆಯಲ್ಲಿ ವಾಸ್ತವ್ಯ ಹೂಡಿದ್ದಕ್ಕೆ ಬಾಬಾ ರಾಮ್ದೇವ್ ಕೀಳುಮಟ್ಟದಲ್ಲಿ ಹೇಳಿಕೆ ನೀಡಿದ್ದಾರೆ. ಅಲ್ಲದೇ ಪರಿಶಿಷ್ಟ ಜಾತಿ ಜನಾಂಗದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿರುವುದು ಸರಿಯಲ್ಲ ಎಂದು ಸಂಘಟನೆಯ ಪ್ರಮುಖರು ಹೇಳಿದರು.
ಕೀಳುಮಟ್ಟದ ಹೇಳಿಕೆ ನೀಡಿರುವ ರಾಮ್ದೇವ್ ಅವರ ವಿರುದ್ಧ ಪ್ರಕರಣ ದಾಖಲಿಸಿ, ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಎಂ.ಎಸ್. ಸಿದ್ದಪ್ಪ ಮತ್ತಿತರರು ಪ್ರತಿಭಟನೆಯಲ್ಲಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.