ರಾ. ಹೆದ್ದಾರಿ ಕುಸಿತ: ಸಂಚಾರಕ್ಕೆ ಅಡಚಣೆ
ಶಿವಮೊಗ್ಗ: ಶಿವಮೊಗ್ಗ- ತೀರ್ಥಹಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಸಂಚಾರಕ್ಕೆ ತಾತ್ಕಾಲಿಕವಾಗಿ ಅಡಚಣೆಯಾಗಿದೆ. ಬೇಗುವಳ್ಳಿ ಸಮೀಪದಲ್ಲಿ ರಸ್ತೆ ಕುಸಿತ ಉಂಟಾಗಿದ್ದು, ಹೀಗಾಗಿ ತಾತ್ಕಾಲಿಕವಾಗಿ ವಾಹನಗಳ ಸಂಚಾರವನ್ನು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಡಳಿತ ಕ್ರಮಕೈಗೊಂಡಿದೆ. ಭಾರಿ ವಾಹನಗಳು ಆಯನೂರು ಮಾರ್ಗವಾಗಿ, ಲಘು ವಾಹನಗಳು ಹಳ್ಳಿ ದಾರಿಯಲ್ಲಿ ಸಂಚರಿಸುವ ಸಂಬಂಧ ಜಿಲ್ಲಾಡಳಿತ ಅಧಿಕೃತ ಆದೇಶವನ್ನು ಮಂಗಳವಾರ ಹೊರಡಿಸುವ ಸಾಧ್ಯತೆ ಇದೆ.
15 ದಿನ ಅಡಚಣೆ: ಬೇಗುವಳ್ಳಿ ಸಮೀಪದ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಇದಕ್ಕಾಗಿ ಪಾಯ ತೆಗೆಯಲಾಗಿದೆ. ಇದು ರಸ್ತೆ ಕುಸಿತಕ್ಕೆ ಕಾರಣ ಎನ್ನಲಾಗಿದೆ. ಈ ಕಾರಣ ಪರ್ಯಾಯ ವ್ಯವಸ್ಥೆ ಆಗುವವರೆಗೆ ಸುಮಾರು 15 ದಿನಗಳ ಕಾಲ ಸಂಚಾರಕ್ಕೆ ಅಡಚಣೆಯಾಗುವ ಸಾದ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ, ಪೊಲೀಸ್ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿದ್ದು ಮಾರ್ಗದರ್ಶನ ಪಡೆದುಕೊಂಡರು. ಹಾಗೆಯೇ ಪರ್ಯಾಯ ಮಾರ್ಗದ ಬಗ್ಗೆ ಚರ್ಚೆ ನಡೆಸಿದರು.
ನೇಣು ಬಿಗಿದುಮಹಿಳೆ ಆತ್ಮಹತ್ಯೆ
ಸಾಗರ: ತಾಲೂಕಿನ ಗೆಣಸಿನಕುಣಿ ಸಮೀಪದ ಸಂಪೆಕೈ ಗ್ರಾಮದಲ್ಲಿ ವಿವಾಹಿತ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.
ವಿರೇಂದ್ರ ಯಾನೆ ಕುಮಾರಸ್ವಾಮಿ ಎಂಬುವವರ ಪತ್ನಿ ಕೃಪಾ (30) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮೂಲತಃ ತೀರ್ಥಹಳ್ಳಿ ತಾಲೂಕಿನ ಕೋಟೆಗದ್ದೆ ಗ್ರಾಮದವರಾದ ಕೃಪಾ ಅವರಿಗೆ 9 ವರ್ಷಗಳ ಹಿಂದೆ ಮದುವೆಯಾಗಿತ್ತು. ಅವರಿಗೆ 7 ವರ್ಷದ ಒಬ್ಬಳು ಪುತ್ರಿ ಇದ್ದಾಳೆ. ಮೃತಳ ಸಹೋದರ ನೀಡಿದ ದೂರಿನ ಮೇಲೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ವಿಷ ಸೇವಿಸಿ ಆತ್ಮಹತ್ಯೆ
ಪಟ್ಟಣದ ಶ್ರೀಗಂಧ ಸಂಕೀರ್ಣ ನಿವಾಸಿ ಗೋಪಾಲ ಸಿಂಗ್ (22) ಎಂಬುವವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಗೋಪಾಲಸಿಂಗ್ ಕರಕುಶಲ ಕೆತ್ತನೆ ಕೆಲಸ ಮಾಡುತ್ತಿದ್ದರು. ಭಾನುವಾರ ರಾತ್ರಿ ಶ್ರೀಗಂಧ ಸಂಕೀರ್ಣದ ತಮ್ಮ ನಿವಾಸದಲ್ಲಿ ವಿಷ ಸೇವಿಸಿದ್ದರು. ತಕ್ಷಣ ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

