ಶಿವಮೊಗ್ಗ

ಒನ್‌ವೇ ವಿವಾದ: ಶಾಸಕರ ಮಧ್ಯಸ್ಥಿಕೆ

Published On :

ಶಿವಮೊಗ್ಗ:  ಜೈಲ್ ರಸ್ತೆ ಹಾಗೂ ಗಾಂಧಿನಗರ ರಸ್ತೆಯಲ್ಲಿ ಒನ್ ವೇ ನೀತಿ ಜಾರಿ ಮಾಡಿರುವ ಜಿಲ್ಲಾಡಳಿತದ ಕ್ರಮದ ವಿರುದ್ಧ ಆಕ್ರೋಶ ಮತ್ತಷ್ಟು ಹೆಚ್ಚಾಗಿದೆ. ಸೋಮವಾರ ಲಕ್ಷ್ಮೀ ಚಿತ್ರಮಂದಿರದ ಆವರಣದಲ್ಲಿ ಸೇರಿದ್ದ ಜೈಲ್ ರಸ್ತೆಯ ನೂರಾರು ವ್ಯಾಪಾರಸ್ಥರು, ನಾಗರಿಕರು ಒನ್ ವೇ ವಿಚಾರವಾಗಿ ಚರ್ಚೆ ನಡೆಸಿದರು. ಒನ್ ವೇ ಮಾಡುವುದರಿಂದ ಜನರಿಗೆ ಅನಾನುಕೂಲವೇ ಹೆಚ್ಚು ಎಂಬ ಅಭಿಪ್ರಾಯ ವ್ಯಕ್ತವಾಯಿತು.
ನಗರಪಾಲಿಕೆ ಸದಸ್ಯ ನಾಗರಾಜ ಕಂಕಾರಿ, ರುದ್ರೇಶ್, ಮುಖಂಡರಾದ ಶ್ಯಾಮಸುಂದರ್, ರಂಗನಾಥ್ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಈ ಮಧ್ಯೆಯೇ ಆಂಧ್ರದಲ್ಲಿರುವ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಶಿವಮೊಗ್ಗದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಒನ್ ವೇ ನೀತಿಯನ್ನು ತಾತ್ಕಾಲಿಕ ತಡೆಹಿಡಿಯುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನೊಂದೆಡೆ ಜೈಲ್ ರಸ್ತೆ ಅಗಲೀಕರಣ, ಏಕಮುಖ ಪಾರ್ಕಿಂಗ್ ವ್ಯವಸ್ಥೆ ಬಗ್ಗೆಯೂ ಚರ್ಚೆ ನಡೆದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.