ಶಿವಮೊಗ್ಗ

ಅಪರಿಚಿತ ಶವ ಪತ್ತೆ

Published On :

ಶಿವಮೊಗ್ಗ: ನಗರದ ವಿವಿಧೆಡೆ ಅಪರಿಚಿತ ವ್ಯಕ್ತಿಯ ಶವಗಳು ಪತ್ತೆಯಾಗಿದ್ದು, ವಾರಸುದಾರರು ಸಂಪರ್ಕಿಸುವಂತೆ ಪೊಲೀಸ್ ಇಲಾಖೆ ಪ್ರಕಟಣೆ ನೀಡಿದೆ.
ನಗರದ ಮೆಗ್ಗಾನ್ ಆಸ್ಪತ್ರೆಯ ಶರಾವತಿ ಬಿಲ್‌ಡಿಂಗ್ ಹತ್ತಿರ ಏ. 7ರಂದು ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸುಮಾರು 40 ವರ್ಷ ವಯಸ್ಸಾಗಿದ್ದು, ಈ ವ್ಯಕ್ತಿಯು ಉದ್ದನೆಯ ಮುಖ, ಎಣ್ಣೆಗೆಂಪು ಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಬಿಳಿ-ಕಪ್ಪು ಕೂದಲು ಇರುತ್ತೆ.  ಮತ್ತೊಂದು ಪ್ರಕರಣದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅಪರಿಚಿತ ವ್ಯಕ್ತಿಯೊಬ್ಬ ಚಿಕಿತ್ಸೆ ಗುಣಮುಖವಾಗದೇ ಮೃತಪಟ್ಟಿರುತ್ತಾನೆ. ಮೃತನು ಸುಮಾರು 45 ವರ್ಷ, ಉದ್ದನೆಯ ಮುಖ, ಎಣ್ಣೆಗೆಂಪು ಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಬಿಳಿ-ಕಪ್ಪು ಕೂದಲು ಇರುತ್ತೆ. ಗಡ್‌ಡ ಬಿಟ್ಟಿರುತ್ತಾನೆ. ಕಂದು ಬಣ್ಣದ ಬನಿಯನ್ ಹಾಗೂ ನೀಲಿ ಬಣ್ಣದ ಲುಂಗಿ ಧರಿಸಿರುತ್ತಾನೆ. ಈತನ ಹೆಸರು, ವಿಳಾಸ ಮತ್ತು ವಾರಸುದಾರರು ಪತ್ತೆಯಾಗಿರುವುದಿಲ್ಲ.  ಈ ಪ್ರಕರಣಗಳಲ್ಲಿ ಮೃತಞ ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಅವರನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.