ಶಿವಮೊಗ್ಗ

ಬಾಬಾ ರಾಂದೇವ್ ಮೇಲೆ ಕ್ರಮಕ್ಕೆ ಆಗ್ರಹ

Published On :

ಶಿವಮೊಗ್ಗ: ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಾಬಾ ರಾಮ್‌ದೇವ್ ಅವರ ವಿರುದ್ಧ ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ತಡೆ ಕಾಯ್ದೆಯಂತೆ ಕ್ರಮ ಕೈಗೊಳ್ಳಲು ಒತ್ತಾಯಿಸಿ ಚಿನ್ನಯ್ಯ ಜಿಲ್ಲಾ ಸಂಚಾಲಕರಾಗಿರುವ ದಲಿತ ಸಂಘರ್ಷ ಸಮಿತಿಯು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.
ಲಖ್ನೋದಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾಗ ರಾಹುಲ್ ಗಾಂಧಿ ಅವರನ್ನು ಟೀಕಿಸುವ ಭರಾಟೆಯಲ್ಲಿ ದಲಿತರನ್ನು ಅವಹೇಳನ ಮಾಡಿದ್ದಾರೆ. ದಲಿತರ ಮನೆಗಳಿಗೆ ಹನಿಮೂನ್ ಮತ್ತು ಪಿಕ್‌ನಿಕ್ ಮಾಡಲು ದಲಿತರ ಮನೆಗಳಲ್ಲಿ ವಾಸ್ತವ್ಯ ಹೂಡಲು ಹೋಗುತ್ತಿದ್ದಾರೆ ಎಂದು ದಲಿತರಿಗೆ ನೋವಾಗುವ ರೀತಿಯಲ್ಲಿ ಹೇಳಿಕೆ ನೀಡಿರುತ್ತಾರೆ.
 ಅಧ್ಯಾತ್ಮದ ಬಗ್ಗೆ ಮಾತನಾಡುವ ಇವರ ಕೀಳುಮಟ್ಟದ ಬುದ್ಧಿ ಇದರಿಂದ ಪ್ರದರ್ಶಿತವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯೈಕ್ತಪಡಿಸಿದ್ದಾರೆ.
ಹಲವು ಭೂ ಹಗರಣಗಳಲ್ಲಿ ಭಾಗಿಯಾಗಿರುವ ರಾಮ್‌ದೇವ್ ಅವರು ಪತಂಜಲಿ ಟ್ರಸ್ಟ್ ಹೆಸರಿನಲ್ಲಿ ಹಲವು ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಕಪ್ಪು ಹಣ ವಿಚಾರವಾಗಿ ಹೋರಾಟ ನಡೆಸಿದ ಸಂದರ್ಭದಲ್ಲಿ ಮಹಿಳೆಯಂತೆ ವೇಷ ಬದಲಿಸಿ ತಪ್ಪಿಸಿಕೊಂಡು ಬಂದಿದ್ದನ್ನು ನೋಡಿದರೆ ಇವರ ಡೋಂಗಿ ಹೋರಾಟ ಅರ್ಥವಾಗುತ್ತದೆ. ಚುನಾವಣಾ ಆಯೋಗ ನಿಷೇಧ ಹೇರಿದ ನಂತರವು ಪತ್ರಿಕಾಗೋಷ್ಠಿ ನಡೆಸಿ ಆಯೋಗದ ಆದೇಶ ಧಿಕ್ಕರಿಸಿದ್ದಾರೆ ಎಂದಿದ್ದಾರೆ.
ರಾಮ್‌ದೇವ್ ಅವರನ್ನು ದೌರ್ಜನ್ಯ ತಡೆ ಕಾಯ್ದೆ ಅಡಿ ಬಂಧಿಸಿ, ದೇಶದಲ್ಲಿ ಜಾತಿ ವಿಷ ಬೀಜ ಬಿತ್ತುತ್ತಿರುವ ಇವರನ್ನು ಕೂಡಲೇ ದೇಶದಿಂದ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಪ್ರಮುಖರಾದ ಕೆ.ಎ. ರಾಜಕುಮಾರ್, ಪಳನಿ ರಾಜ್, ಎಂ. ರಂಗಪ್ಪ ಸೇರಿದಂತೆ ಹಲವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.