ಕೃಷಿಸಾಲ ಬಗ್ಗೆಯೂ ತನಿಖೆಗೆ ನಡೆಯಲಿ
ಶಿವಮೊಗ್ಗ: ಡಿಸಿಸಿ ಬ್ಯಾಂಕಿನ ಎಲ್ಲಾ ಕೃಷಿ ಸಾಲಗಳ ಬಗ್ಗೆಯೂ ತನಿಖೆ ನಡೆಯಬೇಕು ಎಂದು ಬಿಜೆಪಿ ರೈತಮೋರ್ಚಾ ರಾಜ್ಯಾಧ್ಯಕ್ಷ ಆರಗ ಜ್ಞಾನೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಹಾಗೂ ಡಿಸಿಸಿ ಬ್ಯಾಂಕಿನ ಎಲ್ಲಾ ಶಾಖೆಗಳಲ್ಲೂ ಅವ್ಯವಹಾರವಾಗಿರುವ ಸಂಶಯವಿದ್ದು, ಕೂಡಲೇ ನಬಾರ್ಡ್ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ತನಿಖೆ ನಡೆಸಬೇಕೆಂದರು.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಸಾಲ ವಿತರಿಸುವಾಗ ಬ್ಯಾಂಕಿನ ನಿರ್ದೇಶಕರು, ಅಧಿಕಾರಿಗಳು ಹಾಗೂ ಸಹಕಾರ ಸಂಸ್ಥೆಯವರು ಕಮಿಷನ್ ಪಡೆದಿರುವ ದೂರುಗಳಿವೆ. ನಿಯಮಗಳನ್ನು ಗಾಳಿಗೆ ತೂರಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದರು.
ಡಿಸಿಸಿ ಬ್ಯಾಂಕ್ ಈಗ ಹಗರಣದಲ್ಲಿ ಸಿಲುಕಿರುವುದರಿಂದ ರೈತರನ್ನು ಮರೆತಿದೆ. ಬೆಳೆ ಸಾಲ ಸಿಗದೇ ರೈತರು ಕಂಗಾಲಾಗಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಆರ್.ಕೆ. ಸಿದ್ದರಾಮಣ್ಣ, ಮುಖಂಡ ಗಿರೀಶ್ ಪಟೇಲ್, ದತ್ತಾತ್ರಿ, ಎಸ್.ಎನ್. ಚನ್ನಬಸಪ್ಪ, ಡಿ.ಎಸ್. ಅರುಣ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

