ಶಿವಮೊಗ್ಗ

ಡಿಸಿಸಿಬಿ ಅಧ್ಯಕ್ಷ ಮಂಜುನಾಥ ಗೌಡ ಸೆರೆ

Published On :

ಶಿವಮೊಗ್ಗ: ಬಹುಕೋಟಿ ಅಡಮಾನ ಅವ್ಯವಹಾರದ ಆರೋಪದಲ್ಲಿ ರಾಜ್ಯ ಅಪೆಕ್ಸ್ ಬ್ಯಾಂಕ್ ಹಾಗೂ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಗುರುವಾರ ಸಂಜೆ ವಿಚಾರಣೆಗೆ ಕರೆಸಿದ್ದ ಜಿಲ್ಲಾ ಅಪರಾಧ ಪತ್ತೆದಳ ಪೊಲೀಸರು ರಾತ್ರಿ 11.30ರ ನಂತರ ಮಂಜುನಾಥ ಗೌಡರನ್ನು ವಶಕ್ಕೆ ಪಡೆದುಕೊಂಡರು. ಶುಕ್ರವಾರ ಮಧ್ಯಾಹ್ನದವರೆಗೂ ವಿಚಾರಣೆ ನಡೆಸಿದ ತನಿಖಾ ತಂಡ, ನಂತರ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯ ತಪಾಸಣೆಗೊಳಪಡಿಸಿ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿತು. ವಿಚಾರಣೆ ನಡೆಸಿದ 2ನೇ ಜೆಎಂಎಫ್‌ಸಿ ನ್ಯಾಯಾಧೀಶ ವಿಜಯಕುಮಾರ್ ರೈ ಮಂಜುನಾಥ ಗೌಡರನ್ನು 3 ದಿನ  ಪೊಲೀಸ್ ಕಸ್ಟಡಿಗೆ ಒಪ್ಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.