ನ್ಯಾಯಾಂಗಕ್ಕೆ ಕಾರ್ಯಂಗದ ಹಸ್ತಕ್ಷೇಪ ಬೇಡ
ಭದ್ರಾವತಿ: ಕಾರ್ಯಾಂಗದ ಹಸ್ತಕ್ಷೇಪವಿಲ್ಲದೇ ನ್ಯಾಯಾಂಗ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡಿದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಯವರೆಗೂ ನ್ಯಾಯ ದೊರಕಿಸಿಕೊಡಲು ಸಾಧ್ಯ ಎಂದು ರಾಷ್ಟ್ರೀಯ ವಕೀಲರ ಪರಿಷತ್ತು ಉಪಾಧ್ಯಕ್ಷ ಎಸ್.ಎಲ್. ಭೋಜೇಗೌಡ ತಿಳಿಸಿದರು.
ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಮತ್ತು ಭದ್ರಾವತಿಯ ವಕೀಲರ ಸಂಘ ಸಂಯುಕ್ತವಾಗಿ ಭದ್ರಾವತಿಯಲ್ಲಿ ಆಯೋಜಿಸಿದ್ದ ನಾಲ್ಕು ದಿನಗಳ ಕಾನೂನು ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿರು.
ಗೊಂದಲ ಸೃಷ್ಟಿ: ಸರ್ವೋಚ್ಚ ನ್ಯಾಯಾಲಯ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡುತ್ತಿರುವುದು ಸಾಕಷ್ಟು ಗೊಂದಲ ಸೃಷ್ಟಿಸಿದೆ. ರಾಷ್ಟ್ರೀಯ ವಕೀಲರ ಪರಿಷತ್ತು ಇದನ್ನು ತೀವ್ರವಾಗಿ ವಿರೋಧಿಸಿದೆ. ಈ ರೀತಿಯ ಧೋರಣೆ ಮುಂದುವರಿದರೆ ನ್ಯಾಯಾಂಗದ ಮೇಲೆ ಕಾರ್ಯಾಂಗದ ದಬ್ಬಾಳಿಕೆ ಹೆಚ್ಚಾಗಿ ನ್ಯಾಯದಾನ ಏರುಪೇರಾಗುವುದು. ರಾಷ್ಟ್ರೀಯ ವಕೀಲರ ಪರಿಷತ್ತು ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಅವರು ತಿಳಿಸಿದರು. ಕಾನೂನು ಕಾರ್ಯಾಗಾರಗಳು ವಕೀಲರ ದೈನಂದಿನ ಚಟುವಟಿಕೆಗಳಿಗೆ ಅನುಕೂಲವಾಗಲಿವೆ ಎಂದು ರಾಜ್ಯ ವಕೀಲರ ಪರಿಷತ್ತು ಸದಸ್ಯ ಎನ್. ಮಲ್ಲೇಶಯ್ಯ ತಿಳಿಸಿದರು. ಇಂತಹ ಕಾರ್ಯಾಗಾರಗಳನ್ನು ಹೆಚ್ಚಾಗಿ ಎಲ್ಲೆಡೆ ನಡೆಸುವುದರಿಂದ ಕಾನೂನುಗಳಲ್ಲಾಗುವ ಬದಲಾವಣೆಗಳ ಮಾಹಿತಿಯನ್ನು ವಕೀಲ ಸಮುದಾಯಕ್ಕೆ ತಿಳಿಸಲು ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದರು.
ಭದ್ರಾವತಿ ವಕೀಲರ ಸಂಘದ ಅಧ್ಯಕ್ಷ ಬಿ.ಎಸ್. ಮಹೇಶ್ ಕುಮಾರ್ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ನ್ಯಾಯಾಧೀಶರಾದ ಜ್ಯೋತಿಶ್ರೀ, ಸುಜಾತ ಸಾಂಬ್ರಾಣಿ, ಸರ್ವಮಂಗಳ, ರಾಚೋಟಿ ಮಹಾಗುಂಡಪ್ಪ ಶಿರೂರು ಹಾಗೂ ವಕೀಲರ ಸಂಘದ ಉಪಾಧ್ಯಕ್ಷ ಮಹಮದ್ ಇಲಿಯಾಜ್ ವೇದಿಕೆಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

