ಪಕ್ಷೇತರ ಅಭ್ಯರ್ಥಿಯಾಗಿ ಗೂಳಿಹಟ್ಟಿ ನಾಮಪತ್ರ
ಶಿಕಾರಿಪುರ: ಕ್ಷೇತ್ರದ ಮರು ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಮೊದಲಿಗೆ ಪಟ್ಟಣದ ಆರಾಧ್ಯ ದೈವ ಹುಚ್ಚೂರಾಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆ ತೆರಳಿ ರಥಬೀದಿ ಮೂಲಕ ತಾಲೂಕು ಕಚೇರಿಗೆ ಆಗಮಿಸಿದ ಅವರು ಚುನಾವಣಾಧಿಕಾರಿ ಉಪವಿಭಾಗಾಧಿಕಾರಿ ಡಾ.ಉದಯಕುಮಾರ ಶೆಟ್ಟಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕ್ರೀಡಾ ಹಾಗೂ ಯುವಜನ ಸೇವಾ ಖಾತೆ ಮತ್ತು ಜವಳಿ ಖಾತೆ ಸಚಿವರಾಗಿ ರಾಜ್ಯ, ಜಿಲ್ಲೆ ಹಾಗೂ ತಾಲೂಕಿನ ಜನತೆಯ ಸೇವೆಗೈಯುವ ಅವಕಾಶವನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದನ್ನು ಜನತೆ ಗುರುತಿಸಿದ್ದಾರೆ ಎಂದರು.
ಶಿವಮೊಗ್ಗ ಪಕ್ಕದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಸಾಮಾನ್ಯ ಕ್ಷೇತ್ರದಲ್ಲಿ ಎಲ್ಲಾ ವರ್ಗದ ಜನತೆಯ ಆಶೀರ್ವಾದಿಂದ ಪ್ರಥಮ ಬಾರಿಗೆ ಚುನಾಯಿತನಾಗಿ, ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದ 6 ಶಾಸಕರಲ್ಲಿ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಹುದ್ದೆಗೆ ಪ್ರಥಮ ಬಾರಿಗೆ ಬೆಂಬಲಿಸಿದ ಏಕೈಕ ಪಕ್ಷೇತರ ಶಾಸಕ ತಾವು ಎಂಬ ಹೆಗ್ಗಳಿಕೆ ಹೊಂದಿರುವುದಾಗಿ ತಿಳಿಸಿ, ಆ ಮೂಲಕ ಸಮಸ್ತ ಶಿಕಾರಿಪುರ ತಾಲೂಕಿನ ಜನತೆ ಪ್ರೀತಿಗೆ ಪಾತ್ರರಾಗಿರುವುದಾಗಿ ತಿಳಿಸಿದರು.
ಜಿಲ್ಲಾ ಭೋವಿ ಸಮಾಜದ ಉಪಾಧ್ಯಕ್ಷ ತಿಮ್ಮರಾಜು, ಬೋವಿ ಯುವ ವೇದಿಕೆ ಅಧ್ಯಕ್ಷ ವಿನಯ್, ಬೆಂಕಿ ಯೋಗೀಶ್, ವಿಜಯ ಪೂಜಾರ್, ಮಂಜುನಾಥ್ ವಿಜಯೇಂದ್ರ ನಾಯ್ಕ, ಮಹೇಶ್‌ನಾಯ್ಕ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

