ಶಿವಮೊಗ್ಗ

ಮುಸ್ಲಿಂ ಸಮುದಾಯಕ್ಕೆ ಬಿಜೆಪಿ ಸರ್ಕಾರ ಹೆಚ್ಚಿನ ಅನುದಾನ: ಹಫೀಜ್

Published On :

ಶಿಕಾರಿಪುರ: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಮಾತ್ರ ಅತ್ಯಧಿಕ ಅನುದಾನದ ಮೂಲಕ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದೆ ಎಂದು ರಾಜ್ಯ ಉರ್ದು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಮೌಲಾನಾ ಅಮ್ಜದ್ ಹುಸೇನ್ ಹಫೀಜ್ ಹೇಳಿದರು.
ಪಟ್ಟಣದ ಮಾಳೇರಕೇರಿಯಲ್ಲಿನ ಬಿಜೆಪಿ ಕಚೇರಿಯಲ್ಲಿ ಭಾನುವಾಪ ನಡೆದ ಮುಸ್ಲಿಂ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಮುಸ್ಲಿಂ ಸಮುದಾಯಕ್ಕೆ ಪೊಳ್ಳು ಆಶ್ವಾಸನೆ ಮೂಲಕ ಸರ್ಕಾರಗಳು ಕಣ್ಣಿಗೆ ಮಣ್ಣೆರೆಚುವ ತಂತ್ರವನ್ನು ವ್ಯವಸ್ಥಿತವಾಗಿ ಮಾಡಿಕೊಂಡು ಬಂದಿವೆ. ಯಡಿಯೂರಪ್ಪನವರು ರಾಜ್ಯದ ಸಿಎಂ ಆಗುವ ಮುಂಚಿನ ಸರ್ಕಾರಗಳು  ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ಕೇವಲ 50 ಕೋಟಿ ಅನುದಾನ ನೀಡುತ್ತಿದ್ದವು. ಅದೇ ಬಿಎಸ್‌ವೈ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಪ್ರಥಮ ಬಜೆಟ್‌ನಲ್ಲಿ ಅನುದಾನ ಏಕಾಏಕಿ 250 ಕೋಟಿಗೆ ಹೆಚ್ಚಿಸುವ ಮೂಲಕ ಸಮುದಾಯದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದಾರೆ ಎಂದರು.
ಸಂಸದ ಯಡಿಯೂರಪ್ಪ ಮಾತನಾಡಿ, ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜನಪರ ಕಾರ್ಯಕ್ರಮ ರೂಪಿಸುವಾಗ ನಿರ್ದಿಷ್ಟ ಜಾತಿ ಪಂಗಡವನ್ನು ಮಾತ್ರ ಕೇಂದ್ರೀಕರಿಸದೆ ಎಲ್ಲಾ ವರ್ಗಕ್ಕೆ ಅನುಕೂಲ ಕಲ್ಪಿಸಿದ್ದಾಗಿ ತಿಳಿಸಿದರು.
ಉಪಚುನಾವಣೆ ಬಿಜೆಪಿ ಅಭ್ಯರ್ಥಿ ರಾಘವೇಂದ್ರ, ರಾಜ್ಯ ಮುಸ್ಲಿಂ ಸಮಾಜ ಮುಖಂಡ ಖುಸ್ರು ಖುರೇಷಿ, ಮುಖಂಡ ಕೆ.ಶೇಖರಪ್ಪ, ಮಂಜುನಾಥ್ ಕೊಪ್ಪಲು, ಸುಕೇಂದ್ರಪ್ಪ, ಮೋಹನ್, ವಸಂತಗೌಡ, ಹನೀಫ್‌ಸಾಬ್, ಬಷೀರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.