ಹೆಚ್ಚುವರಿ ಸೀಟು ನಿಗದಿಗೆ ಒತ್ತಾಯಿಸಿ ಎನ್ಎಸ್ಯುಐ ಪ್ರತಿಭಟನೆ
ಶಿವಮೊಗ್ಗ: ಕುವೆಂಪು ವಿವಿಯಲ್ಲಿ ಸ್ನಾತಕೋತ್ತರ ತರಗತಿಗಳಿಗೆ ಹೆಚ್ಚುವರಿ ಸೀಟುಗಳನ್ನು ನಿಗದಿ ಮಾಡುವಂತೆ ಒತ್ತಾಯಿಸಿ ಎನ್ಎಸ್ಯುಐ ಕಾರ್ಯಕರ್ತರು ಸೋಮವಾರ ಶಂಕರಘಟ್ಟ ಜ್ಞಾನ ಸಹ್ಯಾದ್ರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ನಂತರ ಪ್ರಭಾರ ಕುಲಪತಿ ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು.
ಜ್ಞಾನ ಸಹ್ಯಾದ್ರಿಯಲ್ಲಿ ಭೌತಶಾಸ್ತ್ರ 33, ಗಣಿತ ಶಾಸ್ತ್ರ 46, ರಸಾಯನ ಶಾಸ್ತ್ರಕ್ಕೆ ಕಡೂರು, ಸಹ್ಯಾದ್ರಿ ಕಾಲೇಜು, ಶಂಕರಘಟ್ಟ ಸೇರಿ 87, ಅರ್ಥಶಾಸ್ತ್ರ ವಿಭಾಗದಲ್ಲಿ 95 ಸೀಟುಗಳಿವೆ. ಈ ವಿಭಾಗಗಳಿಗೆ ಇನ್ನಷ್ಟು ಬೇಡಿಕೆ ಇದೆ. ಆದರೂ ವಿಶ್ವವಿದ್ಯಾಲಯ ಕ್ರಮ ಕೈಗೊಳ್ಳುತ್ತಿಲ್ಲ.
ಎಂಕಾಂ ಹಾಗೂ ಎಂಎಸ್ ಡಬ್ಲೂ ಕೋರ್ಸ್ಗೆ ಬೇಡಿಕೆ ಇದ್ದರೂ ಸಾಕಷ್ಟು ಸೀಟುಗಳಿಲ್ಲ. ಆದರೆ ಖಾಸಗಿ ಕಾಲೇಜುಗಳಿಗೆ ಎಂ.ಕಾಂ ತರಗತಿ ನಡೆಸಲು ಅವಕಾಶ ಕೊಡುತ್ತಿದೆ. ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳು ಹೆಚ್ಚು ಶುಲ್ಕ ಭರಿಸಬೇಕಾಗಿದೆ. ಆದ್ದರಿಂದ ವಿಶ್ವವಿದ್ಯಾಲಯವು ಹೆಚ್ಚುವರಿ ಸೀಟು ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಸಹ್ಯಾದ್ರಿ ಕಲಾ ಹಾಗೂ ವಿಜ್ಞಾನ ಕಾಲೇಜಿನಲ್ಲಿ ನಿಗದಿಪಡಿಸಿರುವ ಸೀಟುಗಳಿಗೆ ತಕ್ಕಂತೆ ಕೊಠಡಿ ಸೌಲಭ್ಯವಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಪಾಠ ಪ್ರವಚನ ನಡೆಯುತ್ತಿಲ್ಲ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎನ್ಎಸ್ ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಜಿ. ಮಧುಸೂದನ್, ಜಿಲ್ಲಾಧ್ಯಕ್ಷ ಚೇತನ್, ಪ್ರಮುಖರಾದ ಮುರುಗೇಶ್, ಶ್ರೀಜಿತ್, ಬಾಲಾಜಿ ಸೇರಿದಂತೆ ಹಲವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

