ಶಿವಮೊಗ್ಗ

ಇಂದು ವಿದ್ಯುತ್ ವ್ಯತ್ಯಯ

Published On :

ಶಿವಮೊಗ್ಗ: ಫೆ.3ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಮೆಸ್ಕಾಂ ಘಟಕ-5 ಶಾಖೆಯ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ಸ್ಥಳಾಂತರ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಎನ್.ಟಿ.ರಸ್ತೆ, ಬಿ.ಎಚ್.ರಸ್ತೆ, ಗಾರ್ಡನ್ ಏರಿಯಾ, ನೆಹರೂ ರಸ್ತೆ ಎಡಭಾಗ, ಜಿ.ಎಸ್.ಕೆ.ಎಂ. ರಸ್ತೆ, ಸಿದ್ದಯ್ಯ ಸರ್ಕಲ್, ಗಾಂಧಿಬಜಾರ್ ಎಡಭಾಗ, ಬಿಬಿ ರಸ್ತೆ, ಕುಂಬಾರ ಗುಂಡಿ, ಕಲ್ಲಪ್ಪನ ಕೇರಿ, ಕೆರೆ ದುರ್ಗಮ್ಮನ ಕೇರಿ ಮತ್ತು ವಂದನಾ ಟಾಕೀಸ್ಸುತ್ತಮುತ್ತ, ಓಟಿ ರಸ್ತೆ, ನ್ಯೂ ಮಂಡ್ಲಿ, ಬೈಪಾಸ್ ರಸ್ತೆ, ಸೀಗೆಹಟ್ಟಿ ಭಾಗದಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ನಿಲುಗಡೆ ಇರುತ್ತದೆ ಎಂದು ಘಟಕ-5ರ ಸಹಾಯಕ ಎಂಜಿನಿಯರ್ ತಿಳಿಸಿದ್ದಾರೆ.

ಖಂಡನೆ
ಶಿವಮೊಗ್ಗ: ವಿಧಾನಸಭೆ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ವಿರುದ್ಧ ಹೇಳಿಕೆ ನೀಡುತ್ತಿರುವುದನ್ನು ಖಂಡಿಸುತ್ತದೆ ಎಂದು ವಿಶ್ವ ಹಿಂದೂ ಪರಿಷ್ತ್, ಭಜರಂಗದಳ ತಿಳಿಸಿದೆ. ಅಲ್ಪಸಂಖ್ಯಾತರ ಮತಕ್ಕಾಗಿ ಹಿಂದೂ ಸ್ವಾಮೀಜಿಗಳ ಬಗ್ಗೆ ವಿಚಿತ್ರ ಹೇಳಿಕೆ ನೀಡುತ್ತಿದ್ದಾರೆ. ಅಲ್ಪಸಂಖ್ಯಾತರ ಮತಗಳಿಗೋಸ್ಕರ ವಿಶ್ವ ಹಿಂದೂ ಪರ್ತ್ತ್ ಮತ್ತು ಭಜರಂಗದಳ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಇದನ್ನು ಉಗ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದೆ.

ಇಂದು ಶಿಬಿರ
ಶಿವಮೊಗ್ಗ: ವ್ಯಾಪಾರ, ವಹಿವಾಟನ್ನು ಅಭಿವೃದ್ಧಿಪಡಿಸಿಕೊಂಡು ಆದಾಯ ಹೆಚ್ಚಿಸಿಕೊಳ್ಳುವ ಕುರಿತು ಫೆ.3ರಂದು ಸಂಜೆ 5.30ಕ್ಕೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಮಾರ್ಗದರ್ಶನ ಶಿಬಿರ ಏರ್ಪಡಿಸಲಾಗಿದೆ. ರಾಜ್ಯದ ಉದ್ಯಮಿಗಳಿಗೆ ಮಾರ್ಗದರ್ಶನ ನೀಡುತ್ತಿರುವ ಜಿ.ಕೆ. ಪ್ರಮೋದ್ ಮಾರ್ಗದರ್ಶನ ನೀಡಲಿದ್ದಾರೆ. ಎಚ್. ಮಹೇಂದ್ರಪ್ಪ ಅಧ್ಯಕ್ಷತೆ ವಹಿಸುವರು ಎಂದು ಕೈಗಾರಿಕಾ ಸಂಘದ ಕಾರ್ಯದರ್ಶಿ ಪಿ. ರುದ್ರೇಶ್ ತಿಳಿಸಿದ್ದಾರೆ.

ಬಹಿರಂಗ ಹರಾಜು
ಶಿವಮೊಗ್ಗ:  ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯ ಹಳೆಯ ಪೀಠೋಪಕರಣಗಳನ್ನು ಫೆ.15 ರಂದು ಮಧ್ಯಾಹ್ನ 2.30 ಗಂಟೆಗೆ ಬಾಲರಾಜ್ ಅರಸ್ ರಸ್ತೆಯ ನ್ಯಾಯಾಲಯ ಸಂಕೀರ್ಣದಲ್ಲಿ ಬಹಿರಂಗ ಹರಾಜು ಮೂಲಕ ವಿಲೇ ಮಾಡಲಾಗುವುದು. ಹರಾಜಿನಲ್ಲಿ ಭಾಗವಹಿಸಲಿಚ್ಚಿಸುವವರು ಸೂಕ್ತ ಸಮಯದಲ್ಲಿ ಹಾಜರಾಗಿ ನ್ಯಾಯಾಲಯ ಸಂಕೀರ್ಣದಲ್ಲಿ ಪೀಠೋಪಕರಣಗಳನ್ನು ಪರೀಕ್ಷಿಸಿ, ನಂತರ ಹರಾಜಿನಲ್ಲಿ ಭಾಗವಹಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.