ಜೀವ ರಕ್ಷಣೆಗೆ ರಕ್ತದಾನ ಅವಶ್ಯ: ಸುರೇಶ್
ಕ.ಪ್ರ.ವಾರ್ತೆ, ಶಿವಮೊಗ್ಗ, ಫೆ.2
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ನೆಸ್ಸೆಸ್ ಘಟಕ ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ, ತರುಣೋದಯ ಘಟಕ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಜಾಗೃತಿ ಅಭಿಯಾನ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ, ಪದವೀಧರರ ಸಹಕಾರ ಸಂಘದ ಅಧ್ಯಕ್ಷ ಎಚ್.ಸಿ. ಸುರೇಶ್, ಜೀವ ರಕ್ಷಣೆಯಲ್ಲಿ ರಕ್ತದಾನದ ಪಾತ್ರ ಅತ್ಯಂತ ಮಹತ್ವದ್ದು. ಈ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಅಗತ್ಯವಿದೆ ಎಂದರು.
ಪ್ರಾಕೃತಿಕ ಕ್ರಿಯೆ: ರಕ್ತವು ದೇಹದಿಂದ ಹೊರಗಡೆ ಉತ್ಪಾದನೆ ಮಾಡುವಂತಹದಲ್ಲ. ಅದೊಂದು ಪ್ರಾಕೃತಿಕ ಕ್ರಿಯೆ. ್ಡಹೀಗಾಗಿ ಪ್ರತಿಯೊಬ್ಬ ವ್ಯಕ್ತಿಯ ರಕ್ತ ಅತ್ಯಂತ ಉಪಯುಕ್ತವಾದುದ್ದು ಎಂದ ಅವರು, ರಕ್ತದಾನದ ಮೂಲಕ ಜೀವ ರಕ್ಷಣೆ ಸಾಧ್ಯ ಎಂಬುದನ್ನು ಎಲ್ಲರೂ ಅರಿಯಬೇಕು ಎಂದರು.
ವೈಜ್ಞಾನಿಕ ಹಾಗೂ ವೈದ್ಯಕೀಯ ಅವಿಷ್ಕಾರದಲ್ಲಿ ರಕ್ತದ ಪ್ರತಿಕಣವೂ ಸಮರ್ಪಕವಾಗಿ ಬಳಕೆಯಾಗುತ್ತಿದೆ. ಹೀಗಾಗಿ ರಕ್ತ ವ್ಯರ್ಥವಾಗುವುದಿಲ್ಲ. ವಿದ್ಯಾರ್ಥಿಗಳು ನಿಯಮಿತವಾಗಿ ರಕ್ತದಾನ ಮಾಡುವುದರ ಮುಖಾಂತರ ಸ್ವಾಸ್ಥ್ಯ ಸಮಾಜ ನಿರ್ಮಾಣ ಕಾರ್ಯದಲ್ಲಿ ತೊಡಗಬೇಕೆಂದು ಹೇಳಿದರು.
ಸ್ವಯಂಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆಯ ಕಾರ್ಯದರ್ಶಿ ಜಿ. ವಿಜಯಕುಮಾರ್ ಮಾತನಾಡಿ, ರಕ್ತದಾನ ದಿಂದ ಉತ್ತಮ ಆರೋಗ್ಯ ಹೊಂದಿ ವಿದ್ಯಾಭ್ಯಾಸಕ್ಕೆ ತುಂಬಾ ಸಹಕಾರವಾಗುತ್ತದೆ ಅಲ್ಲದೇ ನಮ್ಮ ದೇಹದಲ್ಲಿ ಯಾವುದಾದರೂ ಗುಪ್ತ ಕಾಯಿಲೆಗಳಿದ್ದರೆ ತಕ್ಷಣ ತಿಳಿಯುತ್ತದೆ ಎಂದರು.
ಪ್ರೊ. ಎಂ.ಕೆ. ನಾರಾಯಣಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ರಕ್ತದಾನಿ ಧರಣೇಂದ್ರ ದಿನಕರ್, ಎನ್ನೆಸ್ಸೆಸ್ ಯೋಜನಾಧಿಕಾರಿ ಎಂ. ಬಸವಣ್ಯಪ್ಪ, ಜಿ.ಎಸ್. ಅಶೋಕ್ ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಂದ ರೆಡ್‌ಕ್ರಾಸ್ ಸಂಸ್ಥೆಯ ಮೊಬೈಲ್ ಬಸ್ಸಿನಲ್ಲಿ ರಕ್ತದಾನ ಶಿಬಿರ ನೆರವೇರಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

