ಪಡಿತರ ವಿತರಣೆಗೆ ಸಮಯ ನಿಗದಿ
ಕಾಳಸಂತೆಯಲ್ಲಿ ಪಡಿತರ ಮಾರಿದರೆ ಪಡಿತರ ಚೀಟಿ ರದ್ದು: ಎಚ್ಚರಿಕೆ
ತ್ಯಾಗರ್ತಿ: ಸಾಗರ ತಾಲೂಕಿನ ಹಿರೇಬಿಲಗುಂಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಂತೆ ಗ್ರಾಮದ ನ್ಯಾಯ ಬೆಲೆ ಅಂಗಡಿಗೆ ಹಿರೇಬಿಲಗುಂಜಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಆಷ್ಪಕ್ ಅಹಮದ್ ಮತ್ತು ಆಹಾರ ಖಾತ್ರಿ ಸಮಿತಿ ಅಧ್ಯಕ್ಷರಾದ ರತ್ನಮ್ಮ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನ್ಯಾಯಬೆಲೆ ಅಂಗಡಿಯನ್ನು ಪ್ರತೀ ದಿನ ಮುಂಜಾನೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಜನರ ಸೇವೆಗೆ ತೆರೆದಿದ್ದು ಇದರ ಪ್ರಯೋಜನವನ್ನು ಗ್ರಾಹಕರು ಪಡೆದುಕೊಳ್ಳಬೇಕೆಂದರು.
ಕಾಳಸಂತೆ ವಿರುದ್ಧ ಎಚ್ಚರಿಕೆ: ಗ್ರಾಹಕರು ಸರ್ಕಾರ ನೀಡುವ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಿರುವುದು ನಮ್ಮ ಗಮನಕ್ಕೆ ಬಂದರೆ ಕೊಂಡವರು ಮತ್ತು ಕೊಟ್ಟವರ ಮೇಲೆ ವಂಚನೆ ಪ್ರಕರಣ ದಾಖಲಿಸಿ ಅಂತಹವರ ಪಡಿತರ ಚೀಟಿ ರದ್ದುಪಡಿಸಲಾಗುವುದು ಎಂದು ಎಚ್ಚರಿಸಿದರು. ಅಲ್ಲದೆ ಕೆಲವರು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿರುವುದು ನಮ್ಮ ಗಮನಕ್ಕೆ ಬಂದಿದ್ದು ಅಂತಹ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗುವುದು ಎಂದರು.
ನ್ಯಾಯಬೆಲೆ ಅಂಗಡಿ ಮಾಲಿಕ ಎಚ್.ಆರ್.ಮಂಜುನಾಥ್ ಮಾತನಾಡಿ ಸರ್ಕಾರದ ಅನ್ನ ಭಾಗ್ಯ ಯೋಜನೆಯನ್ನು ಗ್ರಾಹಕರಿಗೆ ಸಹಕಾರಿಯಾಗುವಂತೆ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಮೂರ್ತಿ ಹೊಸಂತೆ, ಲಕ್ಷ್ಮೀ ರಾಧಾಕೃಷ್ಣ, ಇಂದಿರಾ ಗಣಪತಿ, ಸ್ಥಳೀಯ ಗ್ರಾಮಸ್ಥರಾದ ದಿವಾಕರ, ಶ್ರೀನಿವಾಸ್, ಬಂಗಾರಪ್ಪ ಸಂಪಳ್ಳಿ, ಮಂಜಪ್ಪ ಚಿಕ್ಕಬಿಲಗುಂಜಿ, ಖಂಡೋಜಿ ರಾಮಚಂದ್ರ ಹೊಸಂತೆ, ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

