ಸಚಿವರೊಂದಿಗೆ ಇಂದು ಸಂವಾದ
ಶಿವಮೊಗ್ಗ: ಇದೇ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸುತ್ತಿರುವ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಬಿ. ರಮಾನಾಥ ರೈ ಅವರು ಫೆ.4ರಂದು ಮಧ್ಯಾಹ್ನ 3.30ಕ್ಕೆ ಗ್ರಾಮ ಅರಣ್ಯ ಸಮಿತಿ ಹಾಗೂ ಪರಿಸರ ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರೊಂದಿಗೆ ಸಂವಾದ ನಡೆಸಲಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ವಿಧಾನ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್ ಅವರು ಉದ್ಘಾಟಿಸುವರು. ವಿಧಾನಸಭಾ ಸದಸ್ಯ ಕೆ.ಬಿ. ಪ್ರಸನ್ನ ಕುಮಾರ್ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸುವರು.
ಅಂಗನವಾಡಿ ಕಾರ್ಯಕರ್ತೆಯರ ಆಯ್ಕೆ ಪಟ್ಟಿ ಪ್ರಕಟ
ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಭದ್ರಾವತಿ ತಾಲೂಕು ಶಿಶು ಅಭಿವೃದ್ಧಿ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ ಖಾಲಿ ಇದ್ದ 14 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 7 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ. ಅರ್ಜಿದಾರರು ಈ ಆಯ್ಕೆಪಟ್ಟಿಯ ಕುರಿತು ಅಕ್ಷೇಪಣೆಗಳಿದ್ದಲ್ಲಿ ಫೆ.10ರೊಳಗಾಗಿ ಲಿಖಿತವಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಕೃಷಿ ಇಲಾಖೆ ಹಿಂಭಾಗ, ತರೀಕೆರೆ ರಸ್ತೆ ಭದ್ರಾವತಿ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

