ಆರೋಗ್ಯ ಸೇವೆಗೆ '104'
ಶಿವಮೊಗ್ಗ: ಪ್ರತಿಯೊಬ್ಬರಿಗೂ ಸುಲಭದಲ್ಲಿ ಆರೋಗ್ಯ ಸೇವಾ ಸೌಲಭ್ಯ ಕಲ್ಪಿಸಬೇಕೆಂಬುದು ಸರ್ಕಾರದ ಸಂಕಲ್ಪ. ಈ ನಿಟ್ಟಿನಲ್ಲಿ ಆರೋಗ್ಯ ಸೇವೆಯಂತಹ ಅತ್ಯವಶ್ಯ ಸೌಲಭ್ಯಗಳು ಸಕಾಲದಲ್ಲಿ ಹಾಗೂ ಸುಲಭದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ದೊರೆಯುವಂತಾಗಬೇಕೆಂಬ ಸದುದ್ದೇಶದಿಂದ ಸಾರ್ವಜನಿಕರಿಗೆ ಆರೋಗ್ಯ ಸೇವಾ ಸೌಲಭ್ಯಗಳ ಕುರಿತು ಮಾಹಿತಿ ಒದಗಿಸಲು 104 ಆರೋಗ್ಯವಾಣಿ ಸೇವೆ ಜಾರಿಗೆ ತರಲಾಗಿದೆ.
ಅರ್ಜಿ ಆಹ್ವಾನ
ಶಿವಮೊಗ್ಗ: ಕುಮಟಾದ ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ಫೆಬ್ರವರಿ 2ನೇ ವಾರದಿಂದ ಟಿವಿ ಮತ್ತು ವಿಸಿಡಿ, ಡಿವಿಡಿ ಹಾಗೂ ಇತರೆ ತಾಂತ್ರಿಕ ಉಪಕರಣಗಳ ರಿಪೇರಿ ತರಬೇತಿ ಮತ್ತು ಗೃಹೋಪಯೋಗಿ ವಸ್ತುಗಳನ್ನು(ಮೇಣಬತ್ತಿ, ಅಗರಬತ್ತಿ, ಪಿನೈಲ್, ಸೋಪ್ ಇತರೆ) ತಯಾರಿಸುವ ತರಬೇತಿ ಹಮ್ಮಿಕೊಳ್ಳಲಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ಮತ್ತು ಸೊರಬ ತಾಲೂಕಿನ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ(ಸಿಂಡ್ಆರ್ಸೆಟಿ), ಕೈಗಾರಿಕಾ ವಸಾಹತು ಪ್ರದೇಶ, ಹೆಗಡೆ ರಸ್ತೆ, ಕುಮಟಾ- ಉತ್ತರ ಕನ್ನಡ ಈ ವಿಳಾಸಕ್ಕೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂ. 08386- 220530.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

