ಚುನಾವಣೆಗೆ ಸದೃಢ ವಾತಾವರಣ ನಿರ್ಮಿಸಿ'
ಶಿವಮೊಗ್ಗ: ಮುಂಬರುವ ಲೋಕಸಭೆ ಚುನಾವಣೆ ಮಹತ್ವದ ಚುನಾವಣೆಯಾಗಿದೆ. ಪಕ್ಷವನ್ನು ಇನ್ನಷ್ಟು ಸದೃಢವಾಗಿ ಕಟ್ಟುವ ಮೂಲಕ ಅಭ್ಯರ್ಥಿಗಳ ಗೆಲವಿಗೆ ಪೂರಕವಾದ ವಾತಾವರಣ ನಿರ್ಮಾಣ ಮಾಡಬೇಕೆಂದು ಅರಣ್ಯ ಸಚಿವ ರಮಾನಾಥ ರೈ ಹೇಳಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಯಾರೇ ಸ್ಪರ್ಧಿಸಿದರೂ ಅವರ ಗೆಲವಿಗೆ ಶ್ರಮಿಸಬೇಕೆಂದು ಅರಣ್ಯ ಕರೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಜಿಲ್ಲೆಯಲ್ಲಿ ಅರಣ್ಯ ಭೂಮಿ ಒತ್ತುವರಿ ಭೂತ ಕಾಡುತ್ತಿದೆ. ಭೂಮಿ ತೆರವುಗೊಳಿಸುವಂತೆ ಅಧಿಕಾರಿಗಳು ಸಾಗುವಳಿದಾರರಿಗೆ ನೋಟಿಸ್ ನೀಡುತ್ತಿದ್ದಾರೆ.
ಸರ್ಕಾರ ಅರಣ್ಯ ವಾಸಿಗಳನ್ನು ತೆರವುಗೊಳಿಸುತ್ತದೆ ಎಂಬ ಸಂದೇಶ ಹೊರಬಿದ್ದರೆ ಚುನಾವಣೆಯಲ್ಲಿ ಪಕ್ಷಕ್ಕೆ ಹೊಡೆತ ಬೀಳಲಿದೆ. ಹೀಗಾಗಿ ಸಾಗುವಳಿದಾರರ ಪರವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಸಭೆಯಲ್ಲಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಮಾಜಿ ಶಾಸಕ ಕರಿಯಣ್ಣ, ಎಚ್.ಎಂ. ಚಂದ್ರಶೇಖರಪ್ಪ, ಮುಖಂಡರಾದ ಇಸ್ಮಾಯಿಲ್ ಖಾನ್, ವಿಧಾನಪರಿಷತ್ ಮಾಜಿ ಸದಸ್ಯೆ ಪ್ರಫುಲ್ಲ ಮಧುಕರ್, ನಗರಸಭೆ ಮಾಜಿ ಅಧ್ಯಕ್ಷ ಬಿ.ಎ. ರಮೇಶ್ ಹೆಗ್ಡೆ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

